ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ಜ.27ಕ್ಕೆ ಮುಂದೂಡಿದೆ.
ಲೋಕಾಯುಕ್ತ ತನಿಖೆಯಿಂದ ಸತ್ಯಾಂಶ ಹೊರಬರುವುದಿಲ್ಲ. ಆದ್ದರಿಂದ ಈ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ನಲ್ಲಿ ದೂರು ಸಲ್ಲಿಸಿದ್ದರು
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಲೋಕಾಯುಕ್ತ ಪೊಲೀಸರ ತನಿಖಾ ವರದಿ ಎಲ್ಲಿದೆ ಎಂದು ಪ್ರಶ್ನಿಸಿದರು. ಆಗ ಲೋಕಾಯುಕ್ತ ಪರ ವಕೀಲರು ತನಿಖೆ ಇನ್ನೂ ಪೂರ್ಣಗೊಂಡಿಲ್ಲ ಎಂದು ಹೇಳಿದರು. ಜ.26ರ ಸಂಜೆಯ ಒಳಗೆ ಎಷ್ಟು ತನಿಖೆ ನಡೆದಿದೆಯೋ ಅಷ್ಟು ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂದು ಸೂಚಿಸಿ ನ್ಯಾಯಮೂರ್ತಿಗಳು ವಿಚಾರಣೆಯನ್ನು ಜ.27ಕ್ಕೆ ಮುಂದೂಡಿದರು. ಲೋಕಾಯುಕ್ತ ತನಿಖೆಗೆ ತಡೆ ನೀಡುವುದಿಲ್ಲ. ತನಿಖೆ ಮುಂದುವರೆಯುತ್ತಿರಲಿ ಎಂದು ಹೇಳಿದರು.
ಪ್ರಭಾವಿ ರಾಜಕಾರಣಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಪೊಲೀಸರು ತನಿಖೆಯನ್ನು ಪಾರದರ್ಶಕವಾಗಿ ಮಾಡಲು ಸಾಧ್ಯವಿಲ್ಲ. ಲೋಕಾಯುಕ್ತದ ತನಿಖೆ ಮೇಲೆ ಸ್ಪಷ್ಟ ನಂಬಿಕೆ ಇಲ್ಲ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮುಖ್ಯಮಂತ್ರಿಗಳ ಪತ್ನಿ ಪಾರ್ವತಿಯವರು ನಿವೇಶನಗಳನ್ನು ಮರಳಿಸಿದ್ದಾರೆ. ಡಿವೈಎಸ್‌ಪಿಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಸ್ನೇಹಮಯಿ ಕೃಷ್ಣಾ ಪರ ವಕೀಲರು ವಾದಿಸಿದರು.