ಮುಡಾ ಪ್ರಕರಣ : ಸಿಎಂ‌ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ

Prasthutha|

ಬೆಂಗಳೂರು: ಮುಡಾ ಪ್ರಕರಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಪ್ರಕಟಿಸಿದೆ.

- Advertisement -

ಮೂರು ತಿಂಗಳಲ್ಲಿ ತನಿಖೆ ನಡೆಸಬೇಕೆಂದು ಮೈಸೂರು ಲೋಕಾಯುಕ್ತ ಎಸ್‌ಪಿಗೆ ಕೋರ್ಟ್‌ ಆದೇಶಿಸಿದೆ.

- Advertisement -

ಇದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮುಡಾ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.

ರಾಜ್ಯಪಾಲರ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ತನ್ನ ವಿಚಾರಣೆ ಮುಕ್ತಾಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ಹೈಕೋರ್ಟ್​ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ, ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಸಿಎಂ ವಿರುದ್ಧ ಎಫ್​ಐಆರ್​ ದಾಖಲು ಸಾಧ್ಯತೆ

ನ್ಯಾಯಾಲಯ ತನಿಖೆಗೆ ಆದೇಶ ನೀಡಿದ ನಂತರ ಮೈಸೂರು ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್​ಐಆರ್​ ದಾಖಲಾಗುವ ಸಾಧ್ಯತೆ ಇದೆ. 156(3) ಅಡಿ ತನಿಖೆಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಬೇಕೆಂಬ ನಿಯಮವಿದೆ. ಒಂದು ವೇಳೆ ಎಫ್​ಐಆರ್​ ದಾಖಲಾದರೆ ಸಿದ್ದರಾಮಯ್ಯ ಅವರ 40 ವರ್ಷದ ರಾಜಕೀಯ ಜೀವನದಲ್ಲಿ ಇದೊಂದು ಕಪ್ಪುಚುಕ್ಕೆಯಾಗಲಿದೆ.



Join Whatsapp