ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜೀನಾಮಗೆ ಆಗ್ರಹಿಸುತ್ತಲೇ ಇದ್ದಾರೆ. ಈ ಮಧ್ಯೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ.
ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ರಾಜೀನಾಮೆ ವಿಚಾರವಾಗಿ ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಮುಡಾ ಅಧ್ಯಕ್ಷ ಕೆ.ಮರಿಗೌಡ ಭೇಟಿ ಮಾಡಿದ್ದರು. ಆ ಮೂಲಕ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಕೋಡುವುದು ಖಚಿತ ಎನ್ನಲಾಗಿತ್ತು. ಕೆಲ ಕಾಲ ಸಿದ್ದರಾಮಯ್ಯ ಜೊತೆ ಮಾತನಾಡಿರುವ ಮರಿಗೌಡ, ಸಿಎಂ ಸೂಚಿನೆ ಮೇರೆಗೆ ರಾಜೀನಾಮೆ ನೀಡಿದ್ದು, ಇಂದು ಅಧಿಕಾರಿಗಳಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.