ಮೈಸೂರು: ಮುಡಾ ನಿವೇಶನ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಇಲ್ಲಿನ ಲೋಕಾಯುಕ್ತ ಎಸ್.ಪಿ. ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಳಿಗ್ಗೆ 10.10ಕ್ಕೆ ಅವರು ವಿಚಾರಣೆಗೆ ಬಂದಿದ್ದು, ಲೋಕಾಯುಕ್ತ ಎಸ್.ಪಿ. ಟಿ.ಜೆ. ಉದೇಶ್ ನೇತೃತ್ವದ ತಂಡವು ಅವರನ್ನು ವಿಚಾರಣೆಗೆ ಒಳಪಡಿಸುತ್ತಿದೆ.
ಮುಡಾದಿಂದ 50:50 ಅನುಪಾತದಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರು 14 ಬದಲಿ ನಿವೇಶನ ಪಡೆದ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ನ್ಯಾಯಾಲಯದ ನಿರ್ದೇಶನದಂತೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಈ ಪ್ರಕರಣದಲ್ಲಿ ಮೊದಲ ಆರೋಪಿ ಆಗಿದ್ದು, ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಪತ್ನಿಗೆ ನಿವೇಶನ ಕೊಡಿಸಿದ ಆರೋಪ ಅವರ ಮೇಲಿದೆ.