Home ಟಾಪ್ ಸುದ್ದಿಗಳು ಕೆಟ್ಟ ಸಂಪ್ರದಾಯ ಹುಟ್ಟುಹಾಕಬಾರದೆಂದು ಮುಡಾ ಚರ್ಚೆಗೆ ಅವಕಾಶ ನೀಡಿಲ್ಲ: ಸ್ಪೀಕರ್ ಯು.ಟಿ. ಖಾದರ್

ಕೆಟ್ಟ ಸಂಪ್ರದಾಯ ಹುಟ್ಟುಹಾಕಬಾರದೆಂದು ಮುಡಾ ಚರ್ಚೆಗೆ ಅವಕಾಶ ನೀಡಿಲ್ಲ: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ವಿಧಾನಸಭೆ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳ ಪ್ರಕಾರ ಕಾರ್ಯನಿರ್ವಹಿಸಬೇಕಾಗುತ್ತದೆಯೇ ಹೊರತು, ವಿಮರ್ಶೆಗಳ ಮರ್ಜಿಗೆ ಅನುಗುಣವಾಗಿ ಅಲ್ಲ. ನಿಯಮ ಮೀರಿ ಕೆಟ್ಟ ಸಂಪ್ರದಾಯ ಹುಟ್ಟುಹಾಕುವುದು ಇಷ್ಟವಿಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಹಗರಣದ ಸಂಬಂಧಿಸಿ ನಾಲ್ಕು ದಿನ ಚರ್ಚೆ ನಡೆಯಿತು. ಐದನೇ ದಿನ ಮುಡಾ ಹಗರಣ ಬಂತು. ಮುಡಾ ಹಗರಣ ಸಂಬಂಧ ಸದಸ್ಯರು ಸದನದಲ್ಲಿ ಮಂಡಿಸಿದ ನಿಲುವಳಿ ಸೂಚನೆಯನ್ನು ನಿಯಮಗಳ ಪ್ರಕಾರ ಚರ್ಚೆಗೆ ಅವಕಾಶ ನೀಡಲಾಗಿಲ್ಲ. ವಿಧಾನಸಭೆಯ ಸಭಾಧ್ಯಕ್ಷರು ಕರ್ನಾಟಕ ವಿಧಾನಸಭೆ ಕಾರ್ಯ ವಿಧಾನ ಮತ್ತು ನಡವಳಿಕೆಯ ನಿಯಮಗಳ ಪ್ರಕಾರ ಕಾರ್ಯ ನಿರ್ವಹಿಸಬೇಕಾಗುತ್ತದೆಯೇ ಹೊರತು, ವಿಮರ್ಶೆಗಳ ಮರ್ಜಿಗೆ ಅನುಗುಣವಾಗಿ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಮುಡಾ ಹಗರಣದ ಸಂಬಂಧ ಶಾಸಕರು ಮಂಡಿಸಿದ ನಿಲುವಳಿ ಸೂಚನೆಗೆ, ನಿಯಮಗಳ ಪ್ರಕಾರ ಚರ್ಚೆಗೆ ಅವಕಾಶ ನೀಡಲಾಗಲ್ಲ. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮ 62(7)ರ ಪ್ರಕಾರ ‘ನಿಲುವಳಿ ಸೂಚನೆಯು ಭಾರತದ ಯಾವುದೇ ಭಾಗದಲ್ಲಿ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿರುವ ಯಾವುದೇ ವಿಷಯಕ್ಕೆ ಸಂಬಂಧಿಸಿ ಇರಬಾರದು’ಎಂದು ಹೇಳುತ್ತದೆ.
ಮುಡಾ ಹಗರಣದ ತನಿಖೆಗೆ ಈಗಾಗಲೇ ನಿವೃತ್ತ ನ್ಯಾಯಾಧೀಶರ ಆಯೋಗವನ್ನು ರಚನೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಸರಕಾರ ಸ್ಪೀ ಕರ್ ಪೀಠಕ್ಕೆ ನೀಡಿದೆ ಎಂದರು.

Join Whatsapp
Exit mobile version