Home ಟಾಪ್ ಸುದ್ದಿಗಳು ಮುಡಾ ಗಬ್ಬೆದ್ದು ಹೋಗಿದ್ದು, ಸ್ವಚ್ಛಗೊಳಿಸುವೆ: ಸಿದ್ದರಾಮಯ್ಯ

ಮುಡಾ ಗಬ್ಬೆದ್ದು ಹೋಗಿದ್ದು, ಸ್ವಚ್ಛಗೊಳಿಸುವೆ: ಸಿದ್ದರಾಮಯ್ಯ

ಮೈಸೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮೊದಲಿನಿಂದಲೂ ಗೆಬ್ಬೆದ್ದು ಹೋಗಿದ್ದು, ಅದನ್ನು ಸ್ವಚ್ಛಗೊಳಿಸುವ ಕೆಲಸ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಇಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯಿಸಿದ ಅವರು, ‘ನನ್ನ ಪತ್ನಿಗೆ ಬದಲಿ ನಿವೇಶನ ಕೊಟ್ಟ ವಿಷಯದಲ್ಲಿ ಬಿಜೆಪಿಯವರು ರಾಜಕೀಯವನ್ನು ಮುಂದುವರಿಸಿದರೆ ನಾವೂ ರಾಜಕೀಯವಾಗಿಯೇ ಮುಂದುವರಿಯಬೇಕಾಗುತ್ತದೆ. ಅವರಿಗೆ ಹೇಗೆ ಎದಿರೇಟು ಕೊಡಬೇಕು ಎನ್ನುವುದು ಗೊತ್ತಿದೆ’ ಎಂದು ಗುಡುಗಿದರು.


‘ನಾವು ಕಾನೂನಾತ್ಮಕವಾಗಿದ್ದೇವೆ. ಕಾನೂನಿಗೆ ವಿರುದ್ಧವಾಗಿ ಆಗಿರುವುದೆಲ್ಲಿ ಎನ್ನುವುದನ್ನು ಬಿಜೆಪಿಯವರು ತೋರಿಸಲಿ’ ಎಂದು ಸವಾಲು ಹಾಕಿದರು.


‘ಮುಡಾ ಹಗರಣದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಿಗಳ ನೇತೃತ್ವದ ಸಮಿತಿಯಿಂದ ತನಿಖೆ ನಡೆಯುತ್ತಿದೆ. ವರದಿ ಬಂದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇನೆ. ನಮ್ಮ ಕಾಲದಲ್ಲೂ ತಪ್ಪುಗಳು ಆಗಿವೆ. ಬಿಜೆಪಿ ಕಾಲದಲ್ಲೇ ಹೆಚ್ಚು ತಪ್ಪುಗಳಾಗಿವೆ. ಶೇ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ವಿಷಯವನ್ನು ಆಯುಕ್ತರಾದಿಯಾಗಿ ಯಾರೂ ದುರುಪಯೋಗ ಮಾಡಿಕೊಳ್ಳದಂತೆ ಸರಿಪಡಿಸುತ್ತೇವೆ’ ಎಂದು ತಿಳಿಸಿದರು.

Join Whatsapp
Exit mobile version