ಸಿಎಂಗೆ ಮುಡಾ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲ

Prasthutha|

ಬೆಂಗಳೂರು: ಮುಡಾ ಕೇಸ್‌ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ ದೊರೆತಿದೆ.

- Advertisement -

ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ. ಸಿದ್ದರಾಮಯ್ಯ ಅವರ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿತ್ತು.

ದೂರು ನೀಡಿದ್ದ ದಿನವೇ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟೀಸ್ ಜಾರಿ ಮಾಡಿದ್ದರು. ಇದೀಗ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ.



Join Whatsapp