ಮುದ್ದೇಬಿಹಾಳ: ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ ವೇಳೆ ಬಿಜೆಪಿ ಕಾರ್ಯಕರ್ತರಿಂದ ಕಲ್ಲು ತೂರಾಟ; ಮಹಿಳೆಗೆ ಗಂಭೀರ ಗಾಯ

Prasthutha|

- Advertisement -

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಸಿಎಸ್ ನಾಡಗೌಡ ಪ್ರಚಾರ ವೇಳೆ ಕಲ್ಲು ತೂರಾಟ ನಡೆದಿದ್ದು, ಕಾರ್ಯಕರ್ತೆಯ ತಲೆಗೆ ಗಂಭೀರ ಗಾಯವಾಗಿದೆ.

ಬಿಜೆಪಿ ಕಾರ್ಯಕರ್ತರು ಕಲ್ಲು ಎಸೆದ ಪರಿಣಾಮ ಮಹಿಳಾ ಕಾರ್ಯಕರ್ತೆ ಶಾಂತಾ ಎಂಬವರ ತಲೆಗೆ ಗಂಭೀರ ಗಾಯವಾಗಿದೆ.

- Advertisement -

ಮುದ್ದೇಬಿಹಾಳ ಕ್ಷೇತ್ರದ ಗೋನಾಳ ಗ್ರಾಮದಲ್ಲಿ ನಡೆದ ಪ್ರಚಾರ ವೇಳೆ ಈ ಘಟನೆ ನಡೆದಿದ್ದು, ಗಾಯಾಳು ಮಹಿಳೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದ ನಂತರ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.