ಮೂಡಿಗೆರೆ: 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Prasthutha|

- Advertisement -

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹೆಬ್ಬರಿಗೆ ಗ್ರಾಮದ  ಸುರೇಶ್ ಹೆಬ್ಬರಿಗೆ ಅವರ ಮನೆ ಹತ್ತಿರ  12 ಅಡಿ ಉದ್ದದ ಕಾಳಿಂಗ ಸರ್ಪ ಕಂಡು ಬಂದಿದ್ದು, ಅರಣ್ಯ ಇಲಾಖೆ ಸಮ್ಮುಖದಲ್ಲಿ ಹಿಡಿದು ಸುರಕ್ಷಿತವಾಗಿ ಚಾರ್ಮಾಡಿ ಅಭಯಾರಣ್ಯ ಕ್ಕೆ ಬಿಡಲಾಯಿತು.

ಉರಗ ತಜ್ಞಸ್ನೇಕ್ ಆರೀಫ್  ಹಾವನ್ನು ಹಿಡಿದು  ಅರಣ್ಯ ಇಲಾಖೆಯವರಿಗೆ ಹಸ್ತಾಂತರಿಸಿದರು. ಮಲೆನಾಡು ಭಾಗದಲ್ಲಿ ಹೆಚ್ಚು  ಪ್ರಮಾಣದಲ್ಲಿ ಕಾಳಿಂಗ ಸರ್ಪಗಳು ಕಾಣಿಸುತ್ತಿದ್ದು ಇವುಗಳನ್ನು ಸೆರೆ ಹಿಡಿದು ಸುರಕ್ಷಿತವಾಗಿ  ಅರಣ್ಯ ಪ್ರದೇಶದಲ್ಲಿ ಬಿಡಲಾಗುತ್ತಿದೆ.

Join Whatsapp