ಮೂಡಿಗೆರೆ: ಅಟ್ಟಿಸಿಕೊಂಡು ಬಂದ ಕಾಡಾನೆ; ಕೂದಲೆಳೆ ಅಂತರದಲ್ಲಿ ಪಾರಾದ ಅರಣ್ಯ ಅಧಿಕಾರಿಗಳು

Prasthutha|

ಕೊಟ್ಟಿಗೆಹಾರ: ಮೇಗೂರಿನ ಅತ್ತಿಗುಣಿ ಹರದಲ್ಲಿ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಅರಣ್ಯ ಅಧಿಕಾರಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

- Advertisement -

ಮಲೆಮನೆ ಮೇಗೂರು ಆಲೇಕಾನ್ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಆನೆ ಕಾರ್ಯ ಪಡೆಯ ಉಪವಲಯ ಅರಣ್ಯಾಧಿಕಾರಿ ಸುಹಾಸ್, ಕಿರಣ್ ಕುಮಾರ್, ದೀಕ್ಷಿತ್, ಕಾರ್ತಿಕ್, ಅಶ್ವಿನ್, ಕರ್ಣ, ಗಸ್ತು ಅಧಿಕಾರಿ ಪರಮೇಶ್ ಗ್ರಾಮಸ್ಥರೊಂದಿಗೆ ಸೋಮವಾರ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ನಡೆಸುವ ವೇಳೆ ಮೇಗೂರಿನ ಅತ್ತಗುಣಿ ಸಮೀಪ ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಅರಣ್ಯ ಅಧಿಕಾರಿಗಳು ಕೂದಲೆಳೆಯಲ್ಲಿ ಪಾರಾಗಿದ್ದಾರೆ.

ಕಾಡಾನೆಗಳನ್ನು ಕಾಡಿಗಟ್ಟಿದರೂ ಮತ್ತೆ ಮತ್ತೆ ಊರಿನತ್ತ ಮುಖ ಮಾಡುತ್ತಿದ್ದು ಅರಣ್ಯ ಇಲಾಖೆ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ. ಮಲೆಮನೆ, ಮೇಗೂರು, ಆಲೇಕಾನ್ ಮುಂತಾದ ಕಡೆಗಳಲ್ಲಿ ಕಾಡಾನೆ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು ಕಾಡಾನೆಗಳನ್ನು ಸ್ಥಳಾಂತರ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

- Advertisement -

‘ಮಲೆಮನೆ ಸುತ್ತಮುತ್ತ ಪುಂಡಾನೆಯೊಂದು ಬೀಡು ಬಿಟ್ಟಿದ್ದು ಕಾಡಿಗಟ್ಟುವ ವೇಳೆ ಅಟ್ಟಿಸಿಕೊಂಡು ಬರುತ್ತಿದೆ. ಈ ಪುಂಡಾನೆಯನ್ನು ಸ್ಥಳಾಂತರ ಮಾಡಲು ಅರಣ್ಯ ಇಲಾಖೆ ಮುಂದಾಗಬೇಕಿದೆ’
-ಅಶ್ವತ್, ಮಲೆಮನೆ, ಸಂದೀಪ್ ಆಲೆಕಾನ್. ಗ್ರಾಮಸ್ಥರು

Join Whatsapp