ಭಾರತದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಶೇ.50 ರಷ್ಟು ಕೊಡುಗೆ ಕೊಟ್ಟವರು ಮೊಘಲರು : ಮುಫ್ತಿ

Prasthutha|

- Advertisement -

ಶ್ರೀನಗರ: ಭಾರತದಲ್ಲಿ ಶೇ.50ರಷ್ಟು ಪ್ರವಾಸೋದ್ಯಮ ಕ್ಷೇತ್ರಗಳು ಹೆಚ್ಚಲು ಮೊಘಲರೇ ಕಾರಣ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಔರಂಗಜೇಬ್ ಆಳ್ವಿಕೆಯಲ್ಲಿ ದೇವಾಲಯಗಳು ನಾಶವಾದವು ಎಂಬ ಚರ್ಚೆಯ ಕುರಿತು ಪ್ರತಿಕ್ರಿಯಿಸಿದರು. ಮೋಘಲರಿಂದಲೇ ಭಾರತದಲ್ಲಿ ಪ್ರವಾಸೋದ್ಯಮ ಕ್ಷೇತ್ರಗಳು ಹೆಚ್ಚಿದೆ. ಭಾರತದ ಪ್ರವಾಸೋದ್ಯಮ ಕ್ಷೇತ್ರವನ್ನು ನಾಶ ಮಾಡಲು ಬಿಜೆಪಿ ಬಯಸಿದೆ. ಇದರಿಂದಾಗಿ ಅವರು ಎಲ್ಲಾ ಮಸೀದಿಗಳ ಹಿಂದೆ ಬಿದ್ದಿದ್ದಾರೆ. ಇದೀಗ ಜ್ಞಾನವಾಪಿ ಮಸೀದಿಯ ಹಿಂದೆ ಬಿದ್ದಿದ್ದಾರೆ ಎಂದರು

- Advertisement -

ವಿವೇಕ್ ಅಗ್ನಿಹೋತ್ರಿಯವರ ದಿ ಕಾಶ್ಮೀರಿ ಫೈಲ್ಸ್ ಸಿನಿಮಾವನ್ನು ಟೀಕಿಸಿದ ಅವರು, ಇತ್ತೀಚೆಗೆ ಕಾಶ್ಮೀರದಲ್ಲಿ ಕಾಶ್ಮೀರ ಪಂಡಿತರನ್ನು ಗುರಿಯಾಗಿಸಿಕೊಂಡಿರುವ ಸಿನಿಮಾ ಬಿಡುಗಡೆ ಆಗಿದೆ. ಈ ಚಿತ್ರ ಬಿಡುಗಡೆಯಾದ ನಂತರ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ದ್ವೇಷ ಹೆಚ್ಚಿದೆ. ಅವರು ನೈಜ ಸಮಸ್ಯೆಗಳಿಂದ ದೂರವಿರಲು ಈ ಹಿಂದೂ, ಮುಸ್ಲಿಂ ಸಮಸ್ಯೆಯನ್ನು ಸೃಷ್ಟಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು



Join Whatsapp