ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮೂಲದ ಆರೋಪಿ ಒಬ್ಬನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಗಣೇಶ್ ರಮೇಶ್ ವನಪರ್ಡಿ (19) ಎಂದು ಗುರುತಿಸಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನನ್ನು ವಿಚಾರಣೆಗಾಗಿ ನ.8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಬೆಲ್ಜಿಯಂನಿಂದ ಇ-ಮೇಲ್ ಸಂದೇಶಗಳು ಬಂದಿವೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.