ಮುಖ್ತಾರ್ ಅಬ್ಬಾಸ್ ನಖ್ವಿ ಭಾರತದ ಮುಂದಿನ ಉಪರಾಷ್ಟ್ರಪತಿ ?

Prasthutha|

ದೆಹಲಿ: ಬಿಜೆಪಿ ನಾಯಕ, ಮುಖ್ತಾರ್ ಅಬ್ಬಾಸ್ ನಖ್ವಿ ಬುಧವಾರ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರು ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹ ಕೇಳಿ ಬರುತ್ತಿದೆ.

- Advertisement -

ನಖ್ವಿ ಅವರ ರಾಜ್ಯಸಭಾ ಅವಧಿಯು ಗುರುವಾರಕ್ಕೆ ಮುಕ್ತಾಯವಾಗಲಿದೆ. ಸಚಿವ ಸಂಪುಟ ಸಭೆಯಲ್ಲಿ ನಖ್ವಿ ಅವರ ಕೆಲಸವನ್ನು ಮೋದಿ ಶ್ಲಾಘಿಸಿದ್ದು ಸಚಿವರು ರಾಜೀನಾಮೆ ನೀಡುತ್ತಿದ್ದಾರೆ ಎಂಬುದರ ಸೂಚನೆಯಾಗಿತ್ತು ಎಂದು ಹೇಳಲಾಗುತ್ತಿದೆ. ಸಚಿವ ಸಂಪುಟ ಸಭೆ ಬಳಿಕ ನಖ್ವಿ ಅವರ ಬಿಜೆಪಿ ಅಧ್ಯಕ್ಷರನ್ನು ಬಿಜೆಪಿ ಕಚೇರಿಯಲ್ಲಿ ಭೇಟಿ ಮಾಡಿದ್ದಾರೆ. ಸಭೆ ನಂತರ ನಖ್ವಿ ಅವರು ಪ್ರಧಾನಿ ಮೋದಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಗುರುವಾರ ರಾಜ್ಯಸಭಾ ಅವಧಿ ಪೂರ್ಣಗೊಳ್ಳುವುದರಿಂದ ಅವರು ನಾಳೆ ರಾಜೀನಾಮೆ ನೀಡಬೇಕಿತ್ತು. ಆದರೆ ನಖ್ವಿ ಒಂದು ದಿನ ಮೊದಲೇ ರಾಜೀನಾಮೆ ನೀಡಿದ್ದಾರೆ.


ಉಪರಾಷ್ಟ್ರಪತಿಯಾಗಿ ಎಂ. ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳುತ್ತದೆ.

Join Whatsapp