ಲಖನೌ: ಜೈಲಿನಲ್ಲಿದ್ದ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಸಾವಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ಎಸ್ ಡಿಪಿಐ ರಾಷ್ಟ್ರೀಯ ಉಪಾಧ್ಯಕ್ಷ ಮೊಹಮ್ಮದ್ ಶಫೀ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉತ್ತರ ಪ್ರದೇಶದಲ್ಲಿ ಐದು ಬಾರಿ ಶಾಸಕರಾಗಿದ್ದ ಮುಕ್ತಾರ್ ಅನ್ಸಾರಿ ಅವರು ಜೈಲಿನಲ್ಲಿ ದಿಢೀರ್ ಮರಣ ಹೊಂದಿದ್ದಾರೆ. ಅವರ ಸಾವು ವಿಷಪ್ರಾಶನದಿಂದ ಆಗಿದೆ ಎಂಬ ಮಾಹಿತಿ ಬರುತ್ತಿದೆ. ಇದು ಬಹಳ ಆತಂಕಕಾರಿ ಬೆಳವಣಿಗೆ. ಈ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸುತ್ತೇನೆ ಎಂದು ಆಗ್ರಹಿಸಿದ್ದಾರೆ.