ಇಂದು ಮಧ್ಯಾಹ್ನ ಮುಲಾಯಂ ಸಿಂಗ್ ಯಾದವ್ ಅಂತ್ಯಕ್ರಿಯೆ 

Prasthutha|

ಲಕ್ನೋ: ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಮುಲಾಯಂ ಸಿಂಗ್ ಯಾದವ್ ಅವರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಯುಪಿಯ ಇಟಾವಾದ ಸೈಫಾಯ್ ನಲ್ಲಿ ನಡೆಯಲಿದೆ.

- Advertisement -

ಮುಲಾಯಂ ಸಿಂಗ್ ಅವರು ವಯೋಸಹಜ ಕಾಯಿಲೆಗಳಿಂದ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ತಮ್ಮ 82 ನೇ ವಯಸ್ಸಿನಲ್ಲಿ ನಿಧನರಾದರು. ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಕಳೆದ ಭಾನುವಾರ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿತ್ತು. ಅವರು ಅಖಿಲೇಶ್ ಮತ್ತು ಪ್ರತೀಕ್ ಎಂಬ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೂರು ದಿನಗಳ ರಾಜ್ಯ ಶೋಕಾಚರಣೆಯನ್ನು ಘೋಷಿಸಿದ್ದು, ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಹೇಳಿದ್ದಾರೆ.

- Advertisement -

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಯಾದವ್ ಅವರ ಅಂತ್ಯಕ್ರಿಯೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಅವರ ಛತ್ತೀಸ್ ಗಢದ ಸಹವರ್ತಿ ಭೂಪೇಶ್ ಬಘೇಲ್ ಕಾಂಗ್ರೆಸ್ ಅನ್ನು ಪ್ರತಿನಿಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.



Join Whatsapp