ಮುಲಾಯಂ ಸಿಂಗ್ ಯಾದವ್ ಆರೋಗ್ಯ ಮತ್ತಷ್ಟು ಬಿಗಡಾಯಿಸುತ್ತಿದೆ: ಮೇದಾಂತ ಆಸ್ಪತ್ರೆ ಸ್ಪಷ್ಟನೆ

Prasthutha|

ಲಖನೌ: ಸಮಾಜವಾದಿ ಪಕ್ಷದ ಸಂಸ್ಥಾಪಕ, ಸಂಸದ ಮುಲಾಯಂ ಸಿಂಗ್ ಯಾದವ್ ಅವರ ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದು, ತೀವ್ರ ನಿಗಾ ವಿಭಾಗದಲ್ಲಿ ಜೀವರಕ್ಷಕ ಔಷಧಗಳ ನೆರವಿನೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಮೇದಾಂತ ಆಸ್ಪತ್ರೆ ಮೂಲಗಳು ಭಾನುವಾರ ಸ್ಪಷ್ಟಪಡಿಸಿವೆ.

- Advertisement -

ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಸಾಕಷ್ಟು ಗಂಭೀರವಾಗಿದೆ ಮತ್ತು ವೆಂಟಿಲೇಟರ್ ನಲ್ಲಿ ಜೀವರಕ್ಷಕ ಔಷಧವನ್ನು ಪಡೆಯುತ್ತಿದ್ದಾರೆ. ಅವರಿಗೆ ತಜ್ಞರ ತಂಡ ಗುರುಗ್ರಾಮ್’ನ ಮೇದಾಂತ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡುತ್ತಿದೆ ಎಂದು ಮೂಲಗಳು ತಿಳಿಸಿವೆ.

Join Whatsapp