Home ಕರಾವಳಿ ಮುಲ್ಕಿ: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಮುಲ್ಕಿ: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಮುಲ್ಕಿ: ದ್ವಿಚಕ್ರ ವಾಹನಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟ ಘಟನೆ ಮುಲ್ಕಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ಸವಾರ ಗಂಭೀರ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ವಿದ್ಯಾರ್ಥಿಯನ್ನು ಮುಲ್ಕಿ ಕೊಲಕಾಡಿ ನಿವಾಸಿ ಮನೀಶ್ ಎಂದು ಗುರುತಿಸಲಾಗಿದೆ.

ಮೃತ ಮನೀಶ್ ಹಾಗೂ ಗಾಯಾಳು  ದೀಕ್ಷಿತ್ ಇಬ್ಬರೂ ಮುಲ್ಕಿ ವಿಜಯ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ದೀಕ್ಷಿತ್ ನ ಕಾಲಿನ ಭಾಗಕ್ಕೆ ಗಂಭೀರ  ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಬ್ಬರು ವಿದ್ಯಾರ್ಥಿಗಳು ಅತೀ ವೇಗದಿಂದ ವಾಹನ ಚಲಾಯಿಸಿದ ಕಾರಣದಿಂದಾಗಿ ಪರಸ್ಪರ ಡಿಕ್ಕಿ ಹೊಡೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Join Whatsapp
Exit mobile version