ಮುಲ್ಲಾ ಮುಹಮ್ಮದ್ ಹಸನ್ ಅಫ್ಘಾನ್ ನೂತನ ನಾಯಕ | ತಾಲಿಬಾನ್ ಘೋಷಣೆ

Prasthutha|

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ನೂತನವಾಗಿ ತಾಲಿಬಾನ್ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಸರಕಾರದ ಮುಖ್ಯಸ್ಥರನ್ನಾಗಿ ಮುಲ್ಲಾ ಮುಹಮ್ಮದ್ ಹಸನ್ ಅಖುಂದ್‌ ನೇತೃತ್ವದಲ್ಲಿ ನೂತನ ಸರಕಾರ ರಚನೆಯಾಗಿದೆ ಎಂದು ತಾಲಿಬಾನ್ ಘೋಷಣೆ ಮಾಡಿದೆ.

ತಾಲಿಬಾನ್ ಸಹ ಸಂಸ್ಥಾಪಕ ಅಬ್ದುಲ್ ಘನಿ ಬರದಾರ್ ಅವರನ್ನು ಉಪ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ ಎಂದು ಘೋಷಣೆ ಮಾಡಲಾಗಿದೆ.ತಾಲಿಬಾನ್ ಸಂಸ್ಥಾಪಕ ಮತ್ತು ದಿವಂಗತ ಸರ್ವೋಚ್ಚ ನಾಯಕ ಮುಲ್ಲಾ ಒಮರ್ ಅವರ ಪುತ್ರ ಮುಲ್ಲಾ ಯಾಕೂಬ್ ಅವರನ್ನು ರಕ್ಷಣಾ ಸಚಿವರನ್ನಾಗಿ ನೇಮಿಸಲಾಗಿದೆ. ಹಕ್ಕಾನಿ ನೆಟ್ವರ್ಕ್ ನಾಯಕ ಸಿರಾಜುದ್ದೀನ್ ಹಕ್ಕಾನಿಗೆ ಆಂತರಿಕ ಸಚಿವ ಸ್ಥಾನ ನೀಡಲಾಗಿದೆ ಎಂದು ಮುಜಾಹಿದ್ ಹೇಳಿದ್ದಾರೆ.

- Advertisement -

ಇದರಿಂದಾಗಿ ಕಳೆದ ಕೆಲವು ಸಮಯದಿಂದ ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸಲು ಬಯಸಿದ್ದಂತಹ ತಾಲಿಬಾನ್ ಪಡೆ ಕೊನೆಗೂ ಸರಕಾರ ರಚಿಸಿ ಆಡಳಿತ ನಡೆಸುವತ್ತ ಹೆಜ್ಜೆ ಹಾಕಿದೆ.

- Advertisement -