ಮುಂಬೈ: ನಗರದ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 4 ಕೋಟಿಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಕಲ್ಪಿಸುವ ಮೂಲಕ ಏಷ್ಯಾ ಪೆಸಿಫಿಕ್ ಪ್ರಾಂತ್ಯದಲ್ಲೇ ಅತ್ಯುತ್ತಮವಾದ ವಿಮಾನ ನಿಲ್ದಾಣ ಎಂಬ ಹಿರಿಮೆಗೆ ಪಾತ್ರವಾಗಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಕೌನ್ಸಿಲ್‌ನ ಏರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ ಪ್ರಶಸ್ತಿಗೆ ಭಾಜನವಾಗಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸತತ 7ನೇ ವರ್ಷವೂ ಪ್ರತಿಷ್ಠಿತವಾದ ಅತ್ಯುತ್ತಮ ವಿಮಾನ ನಿಲ್ದಾಣ ಎಂಬ ಹೆಗ್ಗಳಿಗೆ ಪಾತ್ರವಾಗಿದೆ ಎಂದು ಸಿಎಸ್‌ಎಂಐಎ ಹೇಳಿಕೆ ಬಿಡುಗಡೆ ಮಾಡಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಕೌನ್ಸಿಲ್‌ನ (ಎಸಿಐ) ಪ್ರಧಾನ ನಿರ್ದೇಶಕ ಲೂಯಿಸ್ ಫಿರಿಪ್ ಡಿ ಒಲಿವೀರಾ, ಈ ಪ್ರಶಸ್ತಿಯು ವಿಮಾನ ನಿಲ್ದಾಣದ ಇಡೀ ತಂಡದ ಹೊಸ ಪರಿಕಲ್ಪನೆ ಮತ್ತು ಸಮರ್ಪಣೆ ಭಾವವನ್ನು ಗುರುತಿಸಲಿದೆ. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.