ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ರಾಜ್ ಕುಂದ್ರಾಗೆ ಜಾಮೀನು ನೀಡಿದ ಮುಂಬೈ ನ್ಯಾಯಾಲಯ

Prasthutha|

ಮುಂಬೈ: ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ.

- Advertisement -

ಉದ್ಯಮಿ ರಾಜ್ ಕುಂದ್ರಾ ವಿರುದ್ಧ ತನಿಖೆ ನಡೆಸುತ್ತಿದ್ದ ಮುಂಬೈ ಅಪರಾಧ ವಿಭಾಗವು ಒಂದೂವರೆ ಸಾವಿರ ಪುಟಗಳ ಚಾರ್ಜ್ ಶೀಟನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ಇದೀಗ ಈ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರ ಹಾಗೂ ಅವರ ಕಂಪನಿಯ ಉದ್ಯೋಗಿ ರಿಯಾನ್ ಥೋರ್ಪ್ ಗೆ ಮುಂಬೈ ನ್ಯಾಯಾಲಯ 50 ಸಾವಿರ ರೂಪಾಯಿಯ ಜಾಮೀನು ಶೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಿದೆ.



Join Whatsapp