ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಸಿ.ಬಿ ವಿರುದ್ಧ ಮಾಡಲಾದ ಲಂಚ ಮತ್ತು ಅಕ್ರಮ ಆರೋಪದ ಕುರಿತು ಯಾವುದೇ ತನಿಖೆಗೆ ಸಿದ್ಧ ಎಂದು ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ತಿಳಿಸಿದ್ದಾರೆ.
ಕ್ರೂಸ್ ಶಿಫ್ ಡ್ರಗ್ಸ್ ಪ್ರಕರಣದ ಸಾಕ್ಷಿಯೊಬ್ಬರು ಎನ್.ಸಿ.ಬಿ ಮುಖ್ಯಸ್ಥ ಸಮೀರ್ ವಾಂಖೆಡೆ ವಿರುದ್ಧ ಲಂಚ ಮತ್ತು ಅಕ್ರಮದ ಆರೋಪ ಮಾಡಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಮೀರ್, ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿದೆ. ಮಾತ್ರವಲ್ಲ ನಾನು ಯಾವುದೇ ತನಿಖೆಗೆ ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.
ಈ ಮಧ್ಯೆ ಅನನ್ಯ ಪಾಂಡೆ ಹೆಚ್ಚಿನ ವಿಚಾರಣೆಗಾಗಿ ಇಂದು ಎನ್.ಸಿ. ಬಿ ಕಚೇರಿಗೆ ಭೇಟಿ ನೀಡುವ ಸಾಧ್ಯತೆಯಿದೆ.
ಮುಂಬೈನಲ್ಲಿ ಇತ್ತೀಚೆಗೆ ನಡೆಯುತ್ತಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಸಹೋದರಿ ಮತ್ತು ತಾಯಿ ಸೇರಿದಂತೆ ಕುಟುಂಬವನ್ನು ಗುರಿಪಡಿಸಲಾಗುತ್ತಿದೆ ಎಂದು ವಿಶೇಷ ನ್ಯಾಯಾಲಯಕ್ಕೆ ಸಮೀರ್ ವಾಂಖೆಡೆ ತಿಳಿಸಿದ್ದಾರೆ.