ಮುಂಬೈ | ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ರಕ್ಷಣೆ, ಮೂವರು ನಾಪತ್ತೆ

Prasthutha|

ಮುಂಬೈ: ನವಿ ಮುಂಬೈನ ಬೇಲಾಪುರ ಪ್ರದೇಶದಲ್ಲಿ ಇಂದು (ಶನಿವಾರ) ಮುಂಜಾನೆ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿದ್ದ ಇಬ್ಬರನ್ನು ರಕ್ಷಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಮುಂಜಾನೆ 4.10 ಗಂಟೆಯ ಸುಮಾರಿಗೆ ಕಟ್ಟಡ ಕುಸಿದು ಬಿದ್ದಿದೆ. ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಧಾವಿಸಿದ ಎನ್ಡಿಆರ್ಎಫ್ ತಂಡ ಮತ್ತು ನವಿ ಮುಂಬೈ ಮಹಾನಗರ ಪಾಲಿಕೆಯ ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡದಡಿ ಸಿಲುಕಿದ್ದ ಇಬ್ಬರನ್ನು ರಕ್ಷಿಸಿದ್ದಾರೆ.


‘ಇಬ್ಬರನ್ನು ರಕ್ಷಿಸಲಾಗಿದ್ದು, ಅವಶೇಷಗಳಡಿ ಸಿಲುಕಿರುವ ಮೂವರನ್ನು ಸುರಕ್ಷಿತವಾಗಿ ಹೊರತರುವ ಪ್ರಯತ್ನಗಳು ನಡೆಯುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



Join Whatsapp