ವಿದ್ವಾಂಸ ಆನಂದ್ ತೇಲ್ತುಂಬ್ಡೆಗೆ UAPA ಪ್ರಕರಣದಲ್ಲಿ ಜಾಮೀನು ನೀಡಿದ ಮುಂಬೈ ಹೈಕೋರ್ಟ್

Prasthutha|

ಮುಂಬೈ: ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಗೋವಾ ಇನ್ಸ್’ಸ್ಟಿಟ್ಯೂಟ್ ಆಫ್ ಮ್ಯಾನೇಜ್’ಮೆಂಟ್’ನ ಪ್ರೊಫೆಸರ್ ಆಗಿರುವ ಆನಂದ್ ತೇಲ್ತುಂಬ್ಡೆ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

- Advertisement -

ನ್ಯಾಯಮೂರ್ತಿಗಳಾದ ಎ.ಎಸ್.ಗಡ್ಕರಿ ಮತ್ತು ಮಿಲಿಂದ್ ಜಾಧವ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಡಿಸೆಂಬರ್ 31, 2017ರಂದ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಆನಂದ್ ತೇಲ್ತುಂಬ್ಡೆ ಅವರನ್ನು ಆರೋಪಿಯಾಗಿ ಹೆಸರಿಸಲಾಗಿದೆ.

- Advertisement -

ಎನ್’ಐಎ ವಿಶೇಷ ನ್ಯಾಯಾಲಯವು ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದನ್ನು ಪ್ರಶ್ನಿಸಿ 2021 ರಲ್ಲಿ ತೇಲ್ತುಂಬ್ಡೆ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಸ್. ಗಡ್ಕರಿ ಮತ್ತು ಮಿಲಿಂದ್ ಜಾಧವ್ ಅವರ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ.

 73 ವರ್ಷ ಪ್ರಾಯದ ತೇಲ್ತುಂಬ್ಡೆ ಅವರು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಏಜೆನ್ಸಿಯ ಮುಂದೆ ಶರಣಾದ ನಂತರ 2020 ರ ಏಪ್ರಿಲ್ 14 ರಂದು ಎನ್’ಐಎ ಅವರನ್ನು ಬಂಧಿಸಿತ್ತು.

ಈ ಮಧ್ಯೆ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಅವಕಾಶ ಮಾಡಿಕೊಟ್ಟಿರುವ ಹೈಕೋರ್ಟ್‌, ತನ್ನ ಆದೇಶಕ್ಕೆ ಒಂದು ವಾರ ತಡೆ ನೀಡಿದೆ.

ಎಲ್ಗರ್‌ ಪರಿಷತ್‌ ಸಮಾವೇಶದ ಸಂಘಟಕರಲ್ಲಿ ಒಬ್ಬರಾದ ತೇಲ್ತುಂಬ್ಡೆ ಅವರು 2018ರ ಜನವರಿ 1ರಂದು ಮಾಡಿದ ಪ್ರಚೋದನಾಕಾರಿ ಭಾಷಣವು ಗಲಭೆಗೆ ನಾಂದಿ ಹಾಡಿತ್ತು ಎಂಬುದು ಎನ್‌ಐಐ ದೂರಾಗಿದೆ. ತೇಲ್ತುಂಬ್ಡೆ ಅವರು ನಿಷೇಧಿತ ಸಿಪಿಐ (ಎಂ) ಪಕ್ಷದ ಸದಸ್ಯರಾಗಿದ್ದಾರೆ ಎಂದು ಎನ್‌ಐಎ ವಿಶೇಷ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು.

Join Whatsapp