Home ಕ್ರೀಡೆ ಮುಂಬೈ ಇಂಡಿಯನ್ಸ್ ಮಣಿಸಿದ ಲಖನೌ ಸೂಪರ್‌ ಜೈಂಟ್ಸ್

ಮುಂಬೈ ಇಂಡಿಯನ್ಸ್ ಮಣಿಸಿದ ಲಖನೌ ಸೂಪರ್‌ ಜೈಂಟ್ಸ್

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಲಖನೌ ಸೂಪರ್‌ ಜೈಂಟ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದಿದ್ದ ಕೆ.ಎಲ್. ರಾಹುಲ್ ನೇತೃತ್ವದ ಲಖನೌ ಸೂಪರ್‌ ಜೈಂಟ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 214 ರನ್‌ ಕಲೆ ಹಾಕಿತ್ತು.

ಈ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡಕ್ಕೆ 20 ಓವರ್‌ಗಳಲ್ಲಿ 196 ರನ್‌ ಮಾತ್ರ ಗಳಿಸಿ ತನ್ನ ಕೊನೆಯ ಲೀಗ್​ ಪಂದ್ಯವನ್ನು ತವರಿನ ಮೈದಾನದಲ್ಲಿ ಸೋತು ತೀವ್ರ ಮುಖಭಂಗಕ್ಕೆ ಒಳಗಾಯಿತು.

ಗೆದ್ದರೂ ಪ್ಲೇಆಫ್​ಗೆ​ ಲಗ್ಗೆಯಿಡಲಾಗದ ಲಕ್ನೋ 6ನೇ ಸ್ಥಾನಕ್ಕೇರಿದ್ದು, ಸತತ 3ನೇ ಬಾರಿಗೆ ಅಗ್ರ-4ರಲ್ಲಿ ಸ್ಥಾನ ಪಡೆಯಲು ವಿಫಲವಾಯಿತು.

Join Whatsapp
Exit mobile version