ಮುಂಬೈ ಅತ್ಯಾಚಾರ ಪ್ರಕರಣ: ಸಂತ್ರಸ್ತೆಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ

Prasthutha|

ಮುಂಬೈ: ಇತ್ತೀಚಿಗೆ ನಡೆದಿದ್ದ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಘೋಷಿಸಿದ್ದಾರೆ. ಪರಿಹಾರದ ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿ ಮತ್ತು ಇನ್ನಿತರ ಸರ್ಕಾರಿ ಯೋಜನೆಗಳಿಂದ ಭರಿಸಲಾಗುವುದು ಎಂದು ತಿಳಿದುಬಂದಿದೆ.

- Advertisement -

ಸಕಿನಾಕಾ ಏರಿಯಾದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಸುಮಾರು 33 ಗಂಟೆಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಬಳಿಕ ಅವರು ಮೃತಪಟ್ಟಿದ್ದರು.

ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಿಎಂ ಉದ್ಧವ್ ಠಾಕ್ರೆ ಸಭೆ ನಡೆಸಿದ್ದಾರೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಹೆಚ್ಚು ಒತ್ತು ನೀಡುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

Join Whatsapp