ಮುಂಬೈ: ದಕ್ಷಿಣ ಮುಂಬೈನ ಖ್ಯಾತ ಬಿಲ್ಡರ್ ಪರಾಸ್ ಪೋರ್ವಾಲ್ ಅವರು ತಮ್ಮ ವ್ಯವಹಾರದಲ್ಲಿ ಉಂಟಾದ ಆರ್ಥಿಕ ನಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾಳಚೌಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದ್ದು, ಅಕ್ಟೋಬರ್ 20 ರಂದು ಬೆಳಗ್ಗೆ ಬೈಕುಲ್ಲಾದಲ್ಲಿ ಆತ್ಮಹತ್ಯೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ವರದಿ ಮಾಡಿವೆ.
ತನಿಖೆಯ ವೇಳೆ ಪೊಲೀಸರಿಗೆ ಡೆತ್ ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ.