ಮುಂಬೈ: ಕೆಲ ಆಸ್ಪತ್ರೆಗಳಲ್ಲಿ ಸಿಬ್ಬಂದಿ ದಾಖಲಾಗುವ ರೋಗಿಗಳ ಮೇಲೆ ದರ್ಪ ತೋರುವ ಘಟನೆ ನಡೆಯುತ್ತವೆ. ಇದೀಗ ರೋಗಿಯ ಮೇಲೆ ತೀವ್ರ ಹಲ್ಲೆ ನಡೆಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು, ಸಿಸಿ ಕ್ಯಾಮೆರಾ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಮಹಾರಾಷ್ಟ್ರದ ರಾಜಧಾನಿ ಮುಂಬೈನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಪ್ರೊ. ಸುಧಾಂಶು ತ್ರಿವೇದಿ ಎಂಬವವರು ಈ ವಿಡಿಯೋವನ್ನು ಹಂಚಿಕೊಂಡಿದ್ದು, ಈವರೆಗೂ 1.3 ಮಿಲಿಯನ್ಗೂ ಅಧಿಕ ಬಾರಿ ವೀಕ್ಷಣೆಗೆ ಒಳಪಟ್ಟಿದೆ. ರೋಗಿಯ ಮೇಲೆ ಹಲ್ಲೆ ನಡೆಸಿದ ಸಿಬ್ಬಂದಿಯನ್ನು ಕಠಿಣ ಶಿಕ್ಷೆಗೊಳಪಡಿಸಲು ನೆಟ್ಟಿಗರು ಒತ್ತಾಯಿಸಿದ್ದಾರೆ.