ಆನೇಕಲ್: ಮುಂಬೈನಲ್ಲಿ ಸರಸ್ವತಿ ವೈದ್ಯ ಹತ್ಯೆ ಪ್ರಕರಣದ ಮಾದರಿಯಲ್ಲೇ ಈಗ ಬೆಂಗಳೂರಿನಲ್ಲೊಂದು ಕೊಲೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ.
ಬಿಹಾರದಿಂದ ಬೆಂಗಳೂರಿಗೆ ಬಂದಿದ್ದ ಯುವಕರು, ಆಸ್ತಿಗಾಗಿ ಮಹಿಳೆಯನ್ನು ಕೊಲೆ ಮಾಡಿ ದೇಹವನ್ನು ಪೀಸ್ ಮಾಡಿ ಎಸೆದು ಪರಾರಿಯಾಗಿರುವ ಘಟನೆ ಆನೇಕಲ್ ಉಪವಿಭಾಗದ ಬನ್ನೇರುಘಟ್ಟ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಗೀತಾ (54) ಎಂದು ಗುರುತಿಸಲಾಗಿದೆ. ಆರೋಪಿಗಳ ಪೈಕಿ ಇಂದಲ್ ಕುಮಾರ್ (21) ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಜೂನ್ 1ರಂದು ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ತನಿಖೆ ಕೈಗೊಂಡಿದ್ದ ಬನ್ನೇರುಘಟ್ಟ ಪೊಲೀಸರು ಹಂತಕರನ್ನು ಪತ್ತೆಹಚ್ಚಲು ವಿಶೇಷ ತಂಡ ರಚನೆ ಮಾಡಿತ್ತು. ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ಓರ್ವನ ಬಂಧನವಾಗಿದೆ.