Home ಟಾಪ್ ಸುದ್ದಿಗಳು ಮುಂಬೈ: ಮೀರಾ,ಮೊಹಮ್ಮದ್ ರಸ್ತೆಯಲ್ಲಿರುವ 40 ಮುಸ್ಲಿಮರ ಕಟ್ಟಡ ನೆಲಸಮ!

ಮುಂಬೈ: ಮೀರಾ,ಮೊಹಮ್ಮದ್ ರಸ್ತೆಯಲ್ಲಿರುವ 40 ಮುಸ್ಲಿಮರ ಕಟ್ಟಡ ನೆಲಸಮ!

ಮುಂಬೈ: ಆಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಾಗೂ ಬಾಲರಾಮದೇವರ ಪ್ರಾಣಪ್ರತಿಷ್ಠೆ ನಡೆದ ಜ.22ರಂದು ಇಲ್ಲಿನ ಮೀರಾ ರಸ್ತೆಯಲ್ಲಿ ಸಾಗುತ್ತಿದ್ದ ಶ್ರೀರಾಮ ಶೋಭಯಾತ್ರೆ ಮೇಲೆ ಮುಸ್ಲಿಮರು ದಾಳಿ ನಡೆಸಿದ್ದಾರೆಂದು ಆರೋಪಿಸಿ ಅದರ ಮರುದಿನವೇ ಕಾರ್ಯಪ್ರವೃತ್ತಗೊಂಡ ಸರ್ಕಾರ 12ಕ್ಕೂ ಹೆಚ್ಚು ಜನರನ್ನು ಬಂಧಿಸಿತ್ತು. ಬಳಿಕ ಮೊಹಮ್ಮದ್ ಅಲಿ ರಸ್ತೆಯ 40ಕ್ಕೂ ಹೆಚ್ಚು ಕಟ್ಟಡಗಳನ್ನು ಅಕ್ರಮ ಎಂದು ಹೆಸರಿಸಿ ಮಹಾನಗರಪಾಲಿಕೆ ನೆಲಸಮಗೊಳಿಸಿದೆ.

ಮೊಹಮ್ಮದ್ ಅಲಿ ರಸ್ತೆಯಲ್ಲಿ ಪಾದಾಚಾರಿ ಮಾರ್ಗ ಒತ್ತುವರಿ ಮಾಡಿ ಕಟ್ಟಡ, ಅಂಗಡಿ ಮುಂಗಟ್ಟು ಕಟ್ಟಲಾಗಿತ್ತು. ಹೀಗಾಗಿ ಅಕ್ರಮವಾಗಿ ಕಟ್ಟಿರುವ 40ಕ್ಕೂ ಹೆಚ್ಚು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ ಎಂದು ಮಹಾನಗರಪಾಲಿಕೆ ಹೇಳಿದೆ. ಅಕ್ರಮ ಕಟ್ಟಡಗಳ ತೆರವಿಗೆ ಡಿಸೆಂಬರ್‌ ಆರಂಭದಿಂದಲೇ ಮುನ್ಸಿಪಲ್ ಪ್ರಯತ್ನ ನಡೆಸುತ್ತಿತ್ತು. ಎಲ್ಲಾ ಅಕ್ರಮ ಕಟ್ಟಡ ಮಾಲೀಕರಿಗೆ, ಅಂಗಡಿ ಮುಂಗಟ್ಟುಗಳಿಗೆ ನೋಟಿಸ್ ನೀಡಲಾಗಿದೆ. ಇದರಲ್ಲಿ ಧರ್ಮವನ್ನು ತರುವ ಅಗತ್ಯವಿಲ್ಲ ಎಂದು ಮುನ್ಸಿಪಲ್ ಕಾರ್ಪೋರೇಶನ್ ಸ್ಪಷ್ಟಪಡಿಸಿದೆ.

ಮುನ್ಸಿಪಲ್ ಕಾರ್ಪೋರೇಶನ್ ಹಾಗೂ ಮಹಾರಾಷ್ಟ್ರ ಸರ್ಕಾರದ ನಡೆಯನ್ನು ವಿಪಕ್ಷಗಳು ತೀವ್ರವಾಗಿ ಖಂಡಿಸಿದೆ. ಬಲ್ಡೋಜರ್ ಕ್ರಮದಲ್ಲಿ ಸರ್ಕಾರ ಹಿತಾಸಕ್ತಿ ಎದ್ದುಕಾಣುತ್ತಿದೆ. ಅಲ್ಪಸಂಖ್ಯಾತ ಸಮುದಾಯ ಟಾರ್ಗೆಟ್ ಮಾಡಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ಅತುಲ್ ಲೊಂಧೆ ಹೇಳಿದ್ದಾರೆ.

ಕಾನೂನಿನಂತೆ ನೋಟಿಸ್ ನೀಡಿ ಇಂತಿಷ್ಟು ಸಮಯ ನೀಡಬೇಕು. ಕಟ್ಟಡ ಮಾಲೀಕರಿಗೆ ಕಾನೂನು ಅವಕಾಶಗಳನ್ನು ಬಳಸಿಕೊಳ್ಳುವ ಹಕ್ಕಿದೆ.ಆದರೆ ಸರ್ಕಾರ ಇದ್ಯಾವುದನ್ನು ಪರಿಗಣಿಸದೆ ದಾಳಿ ಮಾಡಿದೆ ಎಂದು ಅವರು ಹೇಳಿದ್ದಾರೆ.

Join Whatsapp
Exit mobile version