ಮುಂಬೈನ ಕುರ್ಲಾ ಕಟ್ಟಡ ಕುಸಿತ: ಸಾವಿನ ಸಂಖ್ಯೆ 19ಕ್ಕೆ ಏರಿಕೆ; ಎಫ್ ಐಆರ್ ದಾಖಲು

Prasthutha|

ಮುಂಬೈ: ಮುಂಬೈನ ಕುರ್ಲಾ ಪ್ರದೇಶದಲ್ಲಿ ಸೋಮವಾರ ಕಟ್ಟಡ ಕುಸಿತ ಅವಘಡದಲ್ಲಿ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಮುಂಬೈ ಪೊಲೀಸರು ಬುಧವಾರ ತಿಳಿಸಿದ್ದಾರೆ.

- Advertisement -

ಕುರ್ಲಾದ ನಾಯಕ್ ನಗರ ಸೊಸೈಟಿಯಲ್ಲಿರುವ ವಸತಿ ಕಟ್ಟಡದ ಒಂದು ಭಾಗ ಸೋಮವಾರ ಮಧ್ಯರಾತ್ರಿ ಕುಸಿದು ಬಿದ್ದಿತ್ತು. ಘಟನೆ ಸಂಬಂಧ ಇದೀಗ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, ಗಾಯಗೊಂಡಿರುವ 15 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ಸಂಬಂಧ ದಿಲೀಪ್ ಬಿಸ್ವಾಸ್ ಮತ್ತು ಕಟ್ಟಡದ ಮಾಲೀಕರ ವಿರುದ್ಧ ಐಪಿಸಿಯ ಸೆಕ್ಷನ್ 304 (2), 308, 337, 338 ಮತ್ತು 34 ರ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ ಆರ್ ಎಫ್) ಗಾಯಗೊಂಡವರಿಗೆ ತಲಾ 50,000 ರೂ.ಮತ್ತು ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.



Join Whatsapp