ಭರೂಚ್ ಕ್ಷೇತ್ರ AAPಗೆ ಬಿಟ್ಟುಕೊಟ್ಟ ಕಾಂಗ್ರೆಸ್: ಕ್ಷಮೆ ಕೋರಿದ ಮುಮ್ತಾಝ್ ಪಟೇಲ್

Prasthutha|

ನವದೆಹಲಿ: ಲೋಕಸಭೆ ಚುನಾವಣೆಗೆ ಎಎಪಿ ಮತ್ತು ಕಾಂಗ್ರೆಸ್ ಸೀಟು ಹಂಚಿಕೆ ಮಾಡಿಕೊಂಡಿದ್ದು, ಗುಜರಾತ್ ನ ಭರೂಚ್ ಲೋಕಸಭಾ ಕ್ಷೇತ್ರವನ್ನು ಎಎಪಿಗೆ ಬಿಟ್ಟು ಕೊಡಲಾಗಿದೆ. ಇದಕ್ಕಾಗಿ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪುತ್ರಿ ಮುಮ್ತಾಝ್ ಪಟೇಲ್ ಕ್ಷೇತ್ರದ ಜನರ ಕ್ಷಮೆ ಕೋರಿದ್ದಾರೆ.

- Advertisement -


ಒಟ್ಟು 26 ಲೋಕಸಭಾ ಕ್ಷೇತ್ರಗಳಿರುವ ಗುಜರಾತ್ ನಲ್ಲಿ ಭರೂಚ್ ಮತ್ತು ಭಾವನಗರಲ್ಲಿ ಎಎಪಿ ಸ್ಪರ್ಧಿಸಲಿದೆ. ಉಳಿದ 24 ಕ್ಷೇತ್ರಗಳನ್ನು ಕಾಂಗ್ರೆಸ್ ಗೆ ಬಿಟ್ಟು ಕೊಡಲಾಗಿದೆ.


ಭರೂಚ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅಹ್ಮದ್ ಪಟೇಲ್ ಅವರ ನಿಧನದ ನಂತರ ಅವರ ಪುತ್ರಿ ಮುಮ್ತಾಝ್ ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಈ ಬಾರಿ ಎಎಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್, ಬರೂಚ್ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ.

- Advertisement -


ಇದರ ಭಾಗವಾಗಿ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ ಅವರು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮುಮ್ತಾಜ್ ಕೂಡಾ ಪಾಲ್ಗೊಂಡಿದ್ದರು. ‘ಅಹ್ಮದ್ ಪಟೇಲ್ ಅವರ ಹಿಡಿತದಲ್ಲಿದ್ದ ಭರೂಚ್ ಕ್ಷೇತ್ರವನ್ನು ಈ ಬಾರಿ ಎಎಪಿಗೆ ನೀಡಲಾಗಿದೆ. ಪಕ್ಷವನ್ನು ಇನ್ನಷ್ಟು ಬಲಗೊಳಿಸಲು ಭರೂಚ್ ಕ್ಷೇತ್ರದಲ್ಲಿ ಕೇಡರ್ ಮಟ್ಟದಲ್ಲಿ ಕೆಲಸ ಮಾಡಲಿದ್ದೇನೆ’ ಎಂದು ಮುಮ್ತಾಜ್ ಹೇಳಿದ್ದಾರೆ.


‘ಮೈತ್ರಿಯ ನಂತರವೂ ಭರೂಚ್ ಕ್ಷೇತ್ರವನ್ನು ಉಳಿಸಿಕೊಳ್ಳಲಾರದ್ದಕ್ಕೆ ಜಿಲ್ಲಾ ಮಟ್ಟದ ಪಕ್ಷದ ಮುಖಂಡರಲ್ಲಿ ಕ್ಷಮೆ ಕೋರುತ್ತೇನೆ. ನಿಮ್ಮ ಅಸಮಾಧಾನವನ್ನು ನಾನು ವರಿಷ್ಠರಿಗೆ ತಿಳಿಸುತ್ತೇನೆ. ಆದರೆ ಎಲ್ಲರೂ ಜತೆಗೂಡಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸೋಣ. ಅಹ್ಮದ್ ಪಟೇಲ್ ಅವರು 45 ವರ್ಷಗಳ ಕಾಲ ಹಾಕಿಕೊಟ್ಟ ಪರಂಪರೆಯನ್ನು ಮುಂದುವರಿಸೋಣ’ ಎಂದಿದ್ದಾರೆ.



Join Whatsapp