ಸೆ.3ರಂದು ಬೆಳಗಾವಿ, ಹು-ಧಾರವಾಡ, ಕಲಬುರಗಿ ಮಹಾನಗರ ಪಾಲಿಕೆಗಳಿಗೆ ಚುನಾವಣೆ

Prasthutha|

ಬೆಂಗಳೂರು: ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ. ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆಗಳಿಗೆ ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ. ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಆ. 23 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

- Advertisement -

ಗುರುವಾರ (ಆ.26) ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದ್ದು, ಸೆ.3(ಶುಕ್ರವಾರ) ರಂದು ಮತದಾನ ನಡೆಯಲಿದೆ. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯವಿದ್ದರೆ ಭಾನುವಾರ (ಆ.5)ರಂದು ನಡೆಯಲಿದೆ.


ಮತಗಳ ಎಣಿಕೆಯು ಸೆ.6 (ಸೋಮವಾರ) ಬೆಳಗ್ಗೆ 8ಗಂಟೆಯಿಂದ ನಡೆಯಲಿದೆ. ಬೆಳಗಾವಿಯ 58 ವಾರ್ಡ್ಗಳಿಗೆ, ಹುಬ್ಬಳ್ಳಿ-ಧಾರವಾಡದ 82 ವಾರ್ಡ್ಗಳಿಗೆ, ಕಲಬುರ್ಗಿಯ 55 ವಾರ್ಡ್ಗಳಿಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Join Whatsapp