ಮೂರನೇ ಹೆರಿಗೆಗೆ ಶುಲ್ಕ ವಿಧಿಸಿದ ಪಾಲಿಕೆ!

Prasthutha|

ಜನಸಂಖ್ಯಾ ನಿಯಂತ್ರಣಕ್ಕೆ ಹೀಗೊಂದು ಕ್ರಮ!

- Advertisement -

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ನಿಯಮ ಜಾರಿಗೆ ತರಲಾಗಿದ್ದು, ಮುನ್ಸಿಪಲ್ ಕಾರ್ಪೊರೇಶನ್ ಆಸ್ಪತ್ರೆಗಳಲ್ಲಿ ಉಚಿತ ಹೆರಿಗೆ ಸೌಲಭ್ಯದಲ್ಲಿ ಬದಲಾವಣೆ ಮಾಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ನಗರದ ಆಸ್ಪತ್ರೆಗಳಲ್ಲಿ 2 ಮಕ್ಕಳ ಹೆರಿಗೆಗೆ ಉಚಿತ ಸೌಲಭ್ಯ ನೀಡಲು ನಿರ್ಧರಿಸಲಾಗಿದ್ದು, ಮೂರನೇ ಮಗುವಿನ ಹೆರಿಗೆಗೆ ಶುಲ್ಕ ಪಾವತಿಸಬೇಕಾಗುತ್ತದೆ.

- Advertisement -

ನಗರಸಭೆಯ ಎಲ್ಲಾ ಆಸ್ಪತ್ರೆಗಳಲ್ಲಿ ಈ ನಿಯಮ ಜಾರಿಗೆ ಬರಲಿದೆ. 2 ಮಕ್ಕಳ ನಂತ್ರ ಮೂರನೇ ಮಗು ಜನಿಸಿದರೆ ಹೆರಿಗೆಗೆ ಶುಲ್ಕ ಪಾವತಿ ಮಾಡಬೇಕೆಂದು ಸ್ಥಳೀಯ ಮುಖಂಡ ಭಾಸ್ಕರ್ ಭಟ್ ಹೇಳಿದ್ದಾರೆ. ಹೆರಿಗೆಗೆ ಎಷ್ಟು ಶುಲ್ಕ ವಿಧಿಸಲಾಗುತ್ತಿದೆ ಎನ್ನುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಬಿಜೆಪಿ ಅಧಿಕಾರದಲ್ಲಿರುವ ಈ ಪ್ರದೇಶದಲ್ಲಿ ಶುಲ್ಕ ವಿಚಾರ ಈಗ ಚರ್ಚೆಗೆ ಕಾರಣವಾಗಿದೆ.

Join Whatsapp