Home ಟಾಪ್ ಸುದ್ದಿಗಳು ಮಾಜಿ ಮುಖ್ಯಮಂತ್ರಿಯ ‘ವಿಡಿಯೋ’ ತೋರಿಸಿ ಮುನಿರತ್ನ ಸಚಿವ ಸ್ಥಾನ ಪಡೆದಿದ್ದಾರೆ: ಸಂತ್ರಸ್ತೆ ಸ್ಫೋಟಕ ಆರೋಪ

ಮಾಜಿ ಮುಖ್ಯಮಂತ್ರಿಯ ‘ವಿಡಿಯೋ’ ತೋರಿಸಿ ಮುನಿರತ್ನ ಸಚಿವ ಸ್ಥಾನ ಪಡೆದಿದ್ದಾರೆ: ಸಂತ್ರಸ್ತೆ ಸ್ಫೋಟಕ ಆರೋಪ

ಬೆಂಗಳೂರು: ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸಂತ್ರಸ್ತೆ ಮತ್ತಷ್ಟು ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ.


ಬೆಂಗಳೂರಿನ ರಾಜಭವನ ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಮುನಿರತ್ನ ಮಾಜಿ ಮುಖ್ಯಮಂತ್ರಿಗಳೊಬ್ಬರನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ಮುನಿರತ್ನ ಬಳಿ ಮಾಜಿ ಮುಖ್ಯಮಂತ್ರಿಗಳ ವಿಡಿಯೋ ಇದೆ. ‘ಆ ವಿಡಿಯೋ ತೋರಿಸಿ’ ಬ್ಲ್ಯಾಕ್ ಮೇಲ್ ಮಾಡಿಯೇ ಮುನಿರತ್ನ ಮಂತ್ರಿ ಸ್ಥಾನ ಪಡೆದುಕೊಂಡಿದ್ದರು. ಅವರ ಕೃತ್ಯಗಳನ್ನು ಸಹಿಸಲಾರದೆ ದೂರು ದಾಖಲಿಸಿದ್ದೇವೆ ಎಂದಿದ್ದಾರೆ.


2020ರಲ್ಲಿ ಬಿಜೆಪಿ ಶಾಸಕ ಮುನಿರತ್ನ ಪರಿಚಯವಾಗಿದ್ದಾರೆ. ಮಮತಾ, ವೆಂಕಟೇಶ್ ಎಂಬುವರ ಮೂಲಕ ಪರಿಚಯವಾಗಿದ್ದರು. ಶಾಸಕ ಮುನಿರತ್ನ ನನಗೆ ವಿಡಿಯೋ ಕರೆ ಕೂಡ ಮಾಡಿದ್ದಾರೆ. ಒಂದು ದಿನ ಗೋದಾಮಿನ ಬಳಿ ಕರೆದುಕೊಂಡು ಹೋಗಿದ್ದರು. ಅಲ್ಲಿ ನನ್ನನ್ನು ಹೆದರಿಸಿ ಅತ್ಯಾಚಾರ ಮಾಡಿದ್ದಾರೆ. ಅವರು ಜಾಮೀನು ಪಡೆದು ಬಂದ ಮೇಲೆ ನನಗೆ ಜೀವ ಭಯ ಇದೆ ಎಂದು ಸಂತ್ರಸ್ತೆ ಹೇಳಿದ್ದಾರೆ.


ಮುನಿರತ್ನ ನಾಯ್ಡು ಬಳಿ ಹಲವರ ಖಾಸಗಿ ಅಶ್ಲೀಲ ವಿಡಿಯೋಗಳಿವೆ. ಅದನ್ನು ಇಟ್ಟುಕೊಂಡು ಅವರು ರಾಜಕೀಯ ಎದುರಾಳಿಗಳನ್ನು ಹಣಿಯುತ್ತಿದ್ದರು. ಜತೆಗೆ, ರಾಜಕೀಯ ಎದುರಾಳಿಗಳನ್ನು ಮಣಿಸಲು ಮುನಿರತ್ನ ಹನಿಟ್ರ್ಯಾಪ್ ಷಡ್ಯಂತ್ರ ಹೂಡುತ್ತಿದ್ದರು ಎಂದು ಸಂತ್ರಸ್ತೆ ಈಗಾಗಲೇ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Join Whatsapp
Exit mobile version