ಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಸಂಬಂಧಿಯೊಬ್ಬನನ್ನು ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಡವರಕಲ್ಲು ಎಂಬಲ್ಲಿ ಸೋಮವಾರ ನಡೆದಿದೆ.
ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ನಿವಾಸಿ ರಫೀಕ್ ಕೊಲೆಯಾದವರು. ಮೃತರ ಅತ್ತೆ ಮಗನಾದ ಸಿದ್ದೀಕ್ ಎಂಬಾತನ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ.
ರಫೀಕ್ ಅವರ ಮೃತದೇಹ ಬಂಟ್ವಾಳ ತಾಲೂಕಿನ ಕೋಡ್ಯಮಲೆ ಎಂಬಲ್ಲಿ ಕೊಲೆಗೈದ ಸ್ಥಿತಿಯಲ್ಲಿ ರಸ್ತೆ ಬದಿ ಪತ್ತೆಯಾಗಿದೆ. ಮರದ ತುಂಡಿನಿಂದ ತಲೆಗೆ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೀನ್ಸ್ ಪೇಂಟ್ ಮತ್ತು ಕೆಂಪು ಬಣ್ಣದ ಶರ್ಟ್ ಧರಿಸಿರುವ ರಫೀಕ್ ಮೃತದೇಹ ಅಂಗಾತ ಮಲಗಿದ ಸ್ಥಿತಿಯಲ್ಲಿ ಕಾಡಿನ ಬದಿ ಪತ್ತೆಯಾಗಿದೆ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್, ಪುಂಜಾಲಕಟ್ಟೆ ಠಾಣಾ ಎಸ್ ಐ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಾರಿಯಾಗಿರುವ ಆರೋಪಿ ಸಿದ್ದೀಕ್ ಪತ್ತೆಗೆ ಬಲೆ ಬೀಸಿದ್ದಾರೆ.