Home ಟಾಪ್ ಸುದ್ದಿಗಳು ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ: 8 ಮಂದಿಯ ಬಂಧನ

ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ: 8 ಮಂದಿಯ ಬಂಧನ

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸರು ಹತ್ಯೆಯ ರಹಸ್ಯ ಭೇದಿಸಿದ್ದು, 8 ಮಂದಿಯನ್ನು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ವಿನಾಯಕ್ ಬಾಕಳೆ ಇತರ ಆರೊಪಿಗಳಾದ ಫೈರೋಜ್ ಖಾಜಿ, ಜಿಶಾನ್ ಖಾಜಿ, ಮೀರಜ್​ ಮೂಲದ ಸಾಹಿಲ್, ಸೋಹೆಲ್ ಖಾಜಿ, ಸುಲ್ತಾನ್ ಶೇಖ್, ಮಹೇಶ್ ಸಾಳೋಂಕೆ, ವಾಹಿದ್ ಬೇಪಾರಿ ಬಂಧಿತರು.

ಪ್ರಕರಣದ ಮೊದಲ ಆರೋಪಿ ವಿನಾಯಕ್ ಬಾಕಳೆ (ಪ್ರಕಾಶ್ ಬಾಕಳೆಯ ಮೊದಲ ಪತ್ನಿಯ ಮಗ) ಮತ್ತೊಬ್ಬ ಆರೋಪಿ ಫೈರೋಜ್​ಗೆ 65 ಲಕ್ಷ ರೂಪಾಯಿ ಹಣಕ್ಕೆ ಸುಪಾರಿ ಡೀಲ್​ ಕೊಟ್ಟಿದ್ದ. ಮುಂಗಡವಾಗಿ 2 ಲಕ್ಷ ರೂಪಾಯಿ ಕೊಟ್ಟಿದ್ದ ವಿನಾಯಕ್ ಬಾಕಳೆ ತಂದೆ ಪ್ರಕಾಶ್ ಬಾಕಳೆ, ಅವರ ಪತ್ನಿ ಸುನಂದಾ ಹಾಗೂ ಪುತ್ರ ಕಾರ್ತಿಕ್ ಕೊಲೆಗೆ ಸಂಚು ಹೂಡಿದ್ದ. ತಂದೆ ಪ್ರಕಾಶ್ ಜೊತೆ ವ್ಯವಹಾರಿಕ ವೈಮನಸ್ಸಿನ ಕಾರಣ ಈ ಕೊಲೆಗೆ ಆತ ಸಂಚು ಹೂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಘಟನೆ ದಿನ ಪ್ರಕಾಶ್ ಹಾಗೂ ಅವರ ಪತ್ನಿ ಸುನಂದಾ ಬೇರೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಅವರು ಸಾವಿನಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದಾರೆ. ಮನೆಗೆ ನುಗ್ಗಿದ್ದ ಹಂತಕರು ಅವರ ಬದಲಿಗೆ ಕಾರ್ತಿಕ್ ಜೊತೆ ಇದ್ದ ಸಂಬಂಧಿಕರನ್ನು ಹತ್ಯೆ ಮಾಡಿದ್ದಾರೆ. ಪ್ರಕಾಶ್ ಹಾಗೂ ಸುನಂದಾ ಎಂದು ಭಾವಿಸಿ ಹಂತಕರು ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಜತೆಗಿದ್ದ ಕೊಪ್ಪಳದ ಭಾಗ್ಯ ನಗರ ನಿವಾಸಿ, ಹೋಟೆಲ್ ಉದ್ಯಮಿ ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಇವರನ್ನು ಹತ್ಯೆ ಮಾಡಿದ್ದರು.

Join Whatsapp
Exit mobile version