ಕೊಚ್ಚಿ: ಚಿತ್ರ ನಟಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ತನಿಖಾಧಿಕಾರಿಯನ್ನು ಹತ್ಯೆ ನಡೆಸಲು ಸಂಚು ರೂಪಿಸಿದ ಪ್ರಕರಣದಲ್ಲಿ ನಟ ದಿಲೀಪ್ ಮತ್ತು ಇತರ ಆರೋಪಿಗಳಿಗೆ ಕೇರಳ ಹೈಕೋರ್ಟ್ ಸೋಮವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
2017ರಲ್ಲಿ ನಟ ದಿಲೀಪ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾಗಿದೆ.
ನ್ಯಾಯಮೂರ್ತಿ ಗೋಪಿನಾಥ್ ಪಿ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರು. ಈ ವೇಳೆ ಅವರು ಆರೋಪಿ ತನಿಖೆಗೆ ಸಹಕರಿಸಬೇಕು. ಇದನ್ನು ಉಲ್ಲಂಘಿಸಿದರೆ ಬಂಧನಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ತನಿಖಾಧಿಕಾರಿಯ ಹತ್ಯೆಗೆ ಸಂಚು: ನಟ ದಿಲೀಪ್ ಮತ್ತು ಇತರರಿಗೆ ನಿರೀಕ್ಷಣಾ ಜಾಮೀನು
Prasthutha|