ಆನೇಕಲ್: ದುಷ್ಕರ್ಮಿಗಳ ಗುಂಪೊಂದು ಕಾರು ಅಡ್ಡ ಗಟ್ಟಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಡರಾತ್ರಿ ಆನೇಕಲ್ ತಾಲೂಕಿನ ಜಿಗಿಣಿ ಬಳಿ ನಡೆದಿದೆ.
ಜಿಗಣಿ ನಿವಾಸಿ ಅರ್ಚನಾರೆಡ್ಡಿ ಕೊಲೆಯಾದ ಮಹಿಳೆ ಎಂದು ತಿಳಿದು ಬಂದಿದೆ.
ಅನೈತಿಕ ಸಂಬಂಧ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ನವೀನ್, ಸಂತೋಷ್ ಹತ್ಯೆ ಮಾಡಿರುವ ಆರೋಪಿಗಳು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈ ಸಂಬಂಧ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News