ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ಸಿಧು ಮೂಸೆವಾಲಾ ತಂದೆ

Prasthutha|

ಹೊಸದಿಲ್ಲಿ: ಹತ್ಯೆಗೀಡಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ತಂದೆ ಪಂಜಾಬ್ ನಲ್ಲಿ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ.

- Advertisement -

ಈ ಕುರಿತ ವೀಡಿಯೊ ಟ್ವೀಟ್ ಮಾಡಿದ ಕಾಂಗ್ರೆಸ್, “ಪ್ರಸಿದ್ಧ ಪಂಜಾಬಿ ಗಾಯಕ ದಿವಂಗತ ಸಿಧು ಮೂಸೆವಾಲಾ ಅವರ ತಂದೆ ಬಲ್ಕೌರ್ ಸಿಂಗ್ ಸಿಧು ಜಿ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜತೆಗೆ ಹೆಜ್ಜೆಹಾಕುವ ಮೂಲಕ ದ್ವೇಷ, ಭಯ ಮತ್ತು ಹಿಂಸಾಚಾರವನ್ನು ಹರಡುವ ಶಕ್ತಿಗಳಿಗೆ ತಕ್ಕ ಪ್ರತ್ಯುತ್ತರ ನೀಡಿದರು. ಪಂಜಾಬ್‌ನ ಮಾನ್ಸಾದಲ್ಲಿ ಹಗಲು ಹೊತ್ತಿನಲ್ಲಿ ಸಿಧು ಮುಸೇವಾಲಾ ಅವರನ್ನು ಹತ್ಯೆ ಮಾಡಲಾಗಿತ್ತು” ಎಂದು ಹೇಳಿದೆ.

ಕಳೆದ ವರ್ಷ ಮೇ 29 ರಂದು ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಸಿಧು ಮೂಸೆವಾಲಾ ಎಂದೇ ಖ್ಯಾತರಾಗಿದ್ದ ಶುಭದೀಪ್ ಸಿಂಗ್ ಸಿಧು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

Join Whatsapp