ಮುರುಘಾ ಶ್ರೀ 3 ದಿನ ಪೊಲೀಸ್ ಕಸ್ಟಡಿಗೆ

Prasthutha|

ಚಿತ್ರದುರ್ಗ: ಪೋಕ್ಸೋ ಕಾಯ್ದೆ ಅಡಿಯಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಶೀಗಳನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ.

- Advertisement -

ಮುರುಘಾ ಶ್ರೀಗಳನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದರು, ಆದರೆ ನ್ಯಾಯಲಯ ಸೆಪ್ಟೆಂಬರ್ 5 ರವೆರೆಗೆ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳನ್ನು ಕಸ್ಟಡಿಗೆ ಪಡೆದುಕೊಂಡಿರುವ ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸಲಿದ್ದಾರೆ.

ನಿನ್ನೆ ರಾತ್ರಿ ಮುರುಘಾ ಶ್ರೀಗಳ ಬಂಧಿಸಲಾಗಿದ್ದು, ನ್ಯಾಯಧೀಶರ ಎದುರು ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇಂದು ಬೆಳಗ್ಗೆ ಮಹತ್ವದ ಬೆಳವಣಿಗೆಯೊಂದರಲ್ಲಿ ಶ್ರೀಗಳ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮುರುಘಾ ಶ್ರೀಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಐಸಿಯುವಿಗೆ ಸ್ಥಳಾಂತರಿಸಲಾಗಿತ್ತು.

- Advertisement -

ಈ ಮಧ್ಯೆ ಮುರುಘಾ ಶ್ರೀಗಳನ್ನು ಖುದ್ದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಧೀಶರು ಆದೇಶ ನೀಡಿದ ಹಿನ್ನೆಲೆಯಲ್ಲಿ ಅವರನ್ನು ವೀಲ್ ಚೇರ್ ಸಹಾಯದಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

Join Whatsapp