ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶ್ರೀಗಳ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿತ್ತು.
ಮಠದ ಹಾಸ್ಟೆಲ್ ನಲ್ಲಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸಿಲುಕಿ, ಪೋಕ್ಸೋ ಕೇಸ್ ದಾಖಲಾಗಿ ಕಳೆದ ವರ್ಷ ಮುರುಘಾ ಶರಣರು ಜೈಲುಸೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ನವೆಂಬರ್ 8ರಂದು ಜಾಮೀನು ನೀಡಿತ್ತು ಹೀಗಾಗಿ ಇಂದು(ನವೆಂಬರ್ 16) ಮುರುಘಾಶ್ರೀ ಬರೋಬ್ಬರಿ 14 ತಿಂಗಳು ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ.