Home ಟಾಪ್ ಸುದ್ದಿಗಳು ಮುರುಘಾಶ್ರೀಗೆ ಖಂಡಿತವಾಗಿಯೂ ಶಿಕ್ಷೆ ಆಗೇ ಆಗುತ್ತೆ: ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ

ಮುರುಘಾಶ್ರೀಗೆ ಖಂಡಿತವಾಗಿಯೂ ಶಿಕ್ಷೆ ಆಗೇ ಆಗುತ್ತೆ: ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ

ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶ್ರೀಗೆ ಹೈಕೋರ್ಟ್ ಜಾಮೀನು ನೀಡಿದೆ. ಈ ಬಗ್ಗೆ ಮೈಸೂರಿನ ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ ಪ್ರತಿಕ್ರಿಯಿಸಿದ್ದು, ಮುರುಘಾಶ್ರೀಗೆ ಖಂಡಿತವಾಗಿಯೂ ಶಿಕ್ಷೆ ಆಗೇ ಆಗುತ್ತೆ ಎಂದು ಹೇಳಿದ್ದಾರೆ.

ಕೆಲ ಲೋಪದೋಷ ಇರಬಹುದು. ಹೀಗಾಗಿಯೇ ಅವರಿಗೆ ಜಾಮೀನು ಸಿಕ್ಕಿದೆ. ಜಾಮೀನು ಸಿಕ್ಕ ಮಾತ್ರಕ್ಕೆ ನ್ಯಾಯ ಸಿಗಲ್ಲವೆಂದು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.
ಮತ್ತೊಂದು ಕೇಸ್ ನಲ್ಲಿ ಜಾಮೀನು ಸಿಗಬಾರದೆಂಬದು ನಮ್ಮ ಹೋರಾಟ ಮುಂದುವರೆಯಲಿದೆ. ಜಾಮೀನು ಸಿಕ್ಕ ಮಾತ್ರಕ್ಕೆ ಅವರಿಗೆ ಬಲ ಬಂದಿದೆ ಅಂತಾ ಹೇಳಲಾಗಲ್ಲ. ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

Join Whatsapp
Exit mobile version