Home ಟಾಪ್ ಸುದ್ದಿಗಳು ಸಂತೋಷ್ ಪತ್ನಿಗೆ ಸರ್ಕಾರಿ ಕೆಲಸ ಕೊಡಿಸಲು ಸಿಎಂ ಜೊತೆ ಚರ್ಚೆ: ಮುರುಗೇಶ್ ನಿರಾಣಿ

ಸಂತೋಷ್ ಪತ್ನಿಗೆ ಸರ್ಕಾರಿ ಕೆಲಸ ಕೊಡಿಸಲು ಸಿಎಂ ಜೊತೆ ಚರ್ಚೆ: ಮುರುಗೇಶ್ ನಿರಾಣಿ

ಬೆಳಗಾವಿ: ಸಂತೋಷ್ ಪತ್ನಿಗೆ ಸರ್ಕಾರಿ ಕೆಲಸ ಕೊಡಿಸಲು ಸಿಎಂ ಬೊಮ್ಮಾಯಿ ಜೊತೆ ಚರ್ಚೆ ನಡೆಸಲಾಗುವುದು ಎಂದು ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.

ಸಮರ್ಥ ಕಾಲೋನಿಯಲ್ಲಿರುವ ಸಂತೋಷ್ ಮನೆಗೆ ಭೇಟಿ ನೀಡಿದ ಅವರು ಕುಟುಂಬಸ್ಥರು ಮತ್ತು ಸಂತೋಷ್ ಪತ್ನಿ ಜಯಶ್ರೀ ಅವರಿಗೆ ಸಾಂತ್ವನ ಹೇಳಿದರು.

ಬಳಿಕ ಮಾತನಾಡಿದ ಅವರು, ಸರ್ಕಾರದಿಂದ ಸಾಧ್ಯವಾದಷ್ಟು ಸಹಾಯವನ್ನು ಕುಟುಂಬಕ್ಕೆ ನೀಡಲಾಗುವುದು. ಅಲ್ಲದೆ, ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳುತ್ತೇನೆ. ಸಂತೋಷ್ ಪತ್ನಿಗೆ ಸರ್ಕಾರಿ ನೌಕರಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

Join Whatsapp
Exit mobile version