Home ಟಾಪ್ ಸುದ್ದಿಗಳು ಮೂಸೆವಾಲಾ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಮೂಸೆವಾಲಾ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಪುಣೆ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಸಂತೋಷ್ ಜಾಧವ್ ನನ್ನು ಮಹಾರಾಷ್ಟ್ರದ ಪುಣೆ ಪೊಲೀಸರು ಬಂಧಿಸಿದ್ದಾರೆ. 2021 ಪುಣೆಯಲ್ಲಿ ಕೊಲೆ ಪ್ರಕರಣಕ್ಕೆ ಸಂತೋಷ್​ ಜಾಧವ್​ ಮತ್ತು ನವ್​ನಾಥ್ ಸೂರ್ಯವಂಶಿಯನ್ನು ಬಂಧಿಸಲಾಗಿತ್ತು. ಈ ಪೈಕಿ ಸಂತೋಷ್ ಜಾಧವ್ ಬಂಧಿತ ಸಂತೋಷ್​ ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿ ಎಂದು ಪೊಲೀಸರು ಶಂಕಿಸಿದ್ದು ಆತನನ್ನು ಬಂಧಿಸಿದ್ದಾರೆ

ಸಿಧು ಮೂಸೆವಾಲಾ ಹತ್ಯೆಯಲ್ಲಿ ಸಂತೋಷ್ ಜಾಧವ್ ಜೊತೆಗೆ ಇನ್ನೂ ಯಾರೆಲ್ಲಾ ಭಾಗಿಯಾಗಿದ್ದಾರೆ ಎನ್ನುವ ಬಗ್ಗೆಯೂ ಮಹಾರಾಷ್ಟ್ರ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ನಡುವೆ ಪುಣೆಗೆ ಬಂದಿರುವ ಪಂಜಾಬ್ ಪೊಲೀಸರು, ಪುಣೆ ಪೊಲೀಸರ ವಶದಲ್ಲಿರುವ ಲಾರೆನ್ಸ್ ಬಿಷ್ಣೋಯ್ ಸಹಚರ ಸಿದ್ದೇಶ್ ಕಾಂಬ್ಳೆ ಎಂಬಾತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.

ದೆಹಲಿ ಪೊಲೀಸರ ವಶದಲ್ಲಿರುವ ಬಂಧಿತ ಲಾರೆನ್ಸ್ ಬಿಷ್ಣೋಯ್​ನನ್ನು ಇತ್ತೀಚೆಗಷ್ಟೇ ಮಹಾರಾಷ್ಟ್ರದ ಪುಣೆ ಪೊಲೀಸರು ವಿಚಾರಣೆ ನಡೆಸಿದ್ದರು. ಸಿಧು ಮೂಸೆವಾಲಾ ಕೊಲೆ ಪ್ರಕರಣದ ಆರೋಪಿ ಸಂತೋಷ್ ಜಾಧವ್ ಈ ಹಿಂದೆ ಮಹಾರಾಷ್ಟ್ರದಲ್ಲಿ ನಡೆದಿದ್ದ ಕೊಲೆಯೊಂದರಲ್ಲಿಯೂ ಪ್ರಮುಖ ಪಾತ್ರ ನಿರ್ವಹಿಸಿ ಆತನ ವಿರುದ್ಧ ಪ್ರಕರಣವೂ ದಾಖಲಾಗಿತ್ತು ಎಂದು ತಿಳಿದು ಬಂದಿದೆ.

Join Whatsapp
Exit mobile version