ಮುಂಬೈ: ಖ್ಯಾತ ಉದ್ಯಮಿ ರತನ್ ಟಾಟಾ ನಿನ್ನೆ ರಾತ್ರಿ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಿಸಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲು ಸೂಚಿಸಿದೆ.
ನಾರಿಮನ್ ಪಾಯಿಂಟ್ ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ನಲ್ಲಿ ರತನ್ ಟಾಟಾ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಸದ್ಯ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ಎಲ್ಲಾ ಧರ್ಮದ ಗುರುಗಳಿಂದ ಪ್ರಾರ್ಥನೆ ಸಲ್ಲಿಸಲಾಗುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ. ಪಾರ್ಸಿ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಮತ್ತು ಹಿಂದೂ ಧರ್ಮಗಳ ಗುರುಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಎಲ್ಲಾ ಧರ್ಮದವರು ಸಾಲಿನಲ್ಲಿ ನಿಂತು ಪ್ರಾರ್ಥನೆ ಸಲ್ಲಿಸುತ್ತಿರೋ ಫೋಟೋ ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.