ಸ್ಕಾರ್ಫ್- ಕೇಸರಿ ಶಾಲು ವಿವಾದಕ್ಕೆ ತೆರೆ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ವೇಲ್ ಬಳಸಲು ಅವಕಾಶ

Prasthutha|

ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಕಾರ್ಫ್ ಮತ್ತು ಕೇಸರಿ ಶಾಲು ವಿವಾದ ಕೊನೆಗೂ ಇತ್ಯರ್ಥವಾಗಿದೆ. ಕಾಲೇಜಿನಲ್ಲಿ ಮಂಗಳವಾರ ಕರೆಯಲಾಗಿದ್ದ ಪೋಷಕರ ಸಭೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಗಳಿಗೆ ಸ್ಕಾರ್ಫ್ ಧರಿಸುವಂತಿಲ್ಲ ಹಾಗೂ ತಲೆಯ ಮೇಲೆ ವೇಲ್ ಹಾಕಿಕೊಂಡು ಬರಬಹುದು ಎಂಬ ನಿರ್ಧಾರಕ್ಕೆ ಬರಲಾಗಿದೆ.

- Advertisement -

ಕಾಲೇಜಿನ ಸಭಾಂಗಣದಲ್ಲಿ ನಡೆದ ಪೋಷಕರ ಸಭೆಯಲ್ಲಿ ಪ್ರಾಂಶುಪಾಲ ಅನಂತ್.ಎಸ್ ಮಾತನಾಡಿ, 2018 ರಲ್ಲಿ ಇದೇ ರೀತಿ ವಿವಾದ ಉಂಟಾಗಿತ್ತು. ಆಗ ತಲೆಯ ಮೇಲೆ ವೇಲ್ ಹಾಕಿಕೊಳ್ಳಲು ಮಾತ್ರ ಅವಕಾಶ ಕೊಡಲಾಗಿತ್ತು. ಈ ಬಾರಿಯೂ ಎಲ್ಲರ ಅಭಿಪ್ರಾಯವನ್ನು ಪಡೆದು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಭೆಯಲ್ಲಿ ತಿಳಿಸಿದ್ದಾರೆ.

Join Whatsapp