ನ.1ರಂದು ಮುಸ್ಲಿಂ ಜಮಾತ್ ನಿಂದ ಮಂಗಳೂರು, ಮೂಡುಬಿದಿರೆ ತಾಲೂಕು ಸಮಿತಿಗಳ ಉದ್ಘಾಟನಾ ಸಮಾವೇಶ

Prasthutha|

ಮಂಗಳೂರು : ಮುಸ್ಲಿಂ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಯನ್ನು ಲಕ್ಷ್ಯವಾಗಿಟ್ಟುಕೊಂಡು ಕಾರ್ಯಪ್ರವೃತ್ತವಾಗಿರುವ ಕರ್ನಾಟಕ ಮುಸ್ಲಿಂ ಜಮಾಅತ್ ಸಂಘನೆಯ ಮಂಗಳೂರು ಹಾಗೂ ಮೂಡುಬಿದಿರೆ ತಾಲೂಕು ಸಮಿತಿ ಘೋಷಣಾ ಸಮಾವೇಶ ನ.1ರಂದು ನಡೆಯಲಿದೆ ಎಂದು ಸಂಘಟನೆಯ ಜಿಲ್ಲಾ ಸಂಯೋಜಕ ಅಶ್ರಫ್ ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆ 9:30ಕ್ಕೆ ಕಾಟಿಪಳ್ಳದ ಮಿಸ್ಬಾಹ್ ಕಾಲೇಜಿನ ಮಿಸ್ಬಾಹ್ ಆಡಿಟೋರಿಯಂನಲ್ಲಿ ಮತ್ತು ಸಂಜೆ 4 ಗಂಟೆಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.

- Advertisement -

ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷ ಎಚ್.ಐ. ಅಬೂಸುಫ್ಯಾನ್ ಮದನಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಕೆ.ಎಂ. ಶಾಫಿ ಸಅದಿ ಬೆಂಗಳೂರು, ಜಿಲ್ಲಾ ಕಾರ್ಯಾಧ್ಯಕ್ಷ ಎಸ್.ಎಂ. ರಷೀದ್ ಹಾಜಿ, ಪ್ರಧಾನ ಕಾರ್ಯದರ್ಶಿ ಬಿ.ಎಂ. ಮುಮ್ತಾಜ್ ಅಲಿ, ರಾಜ್ಯ ಕಾರ್ಯದರ್ಶಿ ಅಬ್ದುಲ್ ಹಮೀದ್ ಬಜ್ಪೆ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

- Advertisement -