‘ಸೂರ್ಯ ನಮಸ್ಕಾರ’ಕಡ್ಡಾಯಕ್ಕೆ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ವಿರೋಧ

Prasthutha|

ನವದೆಹಲಿ: ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸೂರ್ಯ ನಮಸ್ಕಾರ ಕಡ್ಡಾಯ ಕುರಿತ ಸರ್ಕಾರದ ಆದೇಶಕ್ಕೆ ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ ವಿರೋಧ ವ್ಯಕ್ತಪಡಿಸಿದ್ದು, ಮುಸ್ಲಿಮ್ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸದಂತೆ ಸೂಚಿಸಿದೆ.

- Advertisement -

ಖಾಲಿದ್ ಸೈಫುಲ್ಲಾ ರಹ್ಮಾನಿ ಈ ಬಗ್ಗೆ ಮಾತನಾಡಿ, ಸ್ವಾತಂತ್ರ್ಯೋತ್ಸವದ ಅಂಗವಾಗಿ ಮೂವತ್ತು ಸಾವಿರ ಶಾಲೆಗಳಲ್ಲಿ ಸೂರ್ಯ ನಮಸ್ಕಾರ ಕಡ್ಡಾಯವಾಗಿ ನಡೆಸುವಂತೆ ಸುತ್ತೋಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಸೂಚಿಸಿದ್ದು, ಇದು ಸಂವಿಧಾನ ನೀಡಿರುವ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದರು.

ಜನವರಿ 1 ರಿಂದ ಶಾಲೆಗಳಲ್ಲಿ ಸೂರ್ಯ ನಮಸ್ಕಾರ ಮಾಡುವಂತೆ ಸರ್ಕಾರ ಸೂಚಿಸಿದ್ದು, ಜನವರಿ 26 ರಂದು ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ಆರೋಪಿಸಿದರು.

- Advertisement -

ಮುಸ್ಲಿಮ್ ವಿದ್ಯಾರ್ಥಿಗಳಿಗೆ ಸೂರ್ಯ ನಮಸ್ಕಾರ ಮಾಡಲು ಅವಕಾಶವಿಲ್ಲ ಮತ್ತು ಈ ಕಾರ್ಯಕ್ರಮದಿಂದ ದೂರವಿರಬೇಕು ಎಂದು ಅವರು ತಿಳಿಸಿದರು.

Join Whatsapp