ಕೊಪ್ಪಳ | ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿ ಅಂಧ ಮುಸ್ಲಿಂ ವೃದ್ಧನಿಗೆ ಹಲ್ಲೆಗೈದ ಪ್ರಕರಣ: ಇಬ್ಬರ ಬಂಧನ

Prasthutha|

ಕೊಪ್ಪಳ: ಮಧ್ಯರಾತ್ರಿ ಮನೆಗೆ ಹೋಗುವಾಗ ದುಷ್ಕರ್ಮಿಗಳು ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ ಮೆಹೆಬೂಬ್ ನಗರದ ಹುಸೇನಸಾಬ್ ಎಂಬ ಮುಸ್ಲಿಂ ವೃದ್ದನ ಮೇಲೆ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

- Advertisement -

ಗಂಗಾವತಿಯ ಕುವೆಂಪು ಬಡಾವಣೆಯ ಸಾಫ್ಟ್ವೇರ್ ಎಂಜಿನಿಯರ್ ಸಾಗರ ಶೆಟ್ಟಿ ಕಲ್ಕಿ ಹಾಗೂ ಕಲ್ಲಪ್ಪನ ಕ್ಯಾಂಪ್ನ ನರಸಪ್ಪ ದನಕಾಯರ ಬಂಧಿತರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಇದುವರೆಗೆ ಎಲ್ಲ ಆಯಾಮಗಳಿಂದ ತನಿಖೆ ಮಾಡಲಾಗಿದೆ. ವೃದ್ಧನಿಗೆ ಜೈ ಶ್ರೀರಾಮ್ ಹೇಳುವಂತೆ ಒತ್ತಡ ಹೇರಲಾಗಿದೆ ಎನ್ನುವ ಆರೋಪಕ್ಕೆ ಯಾವುದೆ ಆಧಾರ ಲಭಿಸಿಲ್ಲ. ಹುಸೇನಸಾಬ್ ಗಡ್ಡಕ್ಕೆ ಬೆಂಕಿ ಹಚ್ಚಲಾಗಿತ್ತು ಎನ್ನುವುದಕ್ಕೂ ದಾಖಲೆ ಲಭಿಸಿಲ್ಲ ಎಂದು ತಿಳಿಸಿದರು.



Join Whatsapp