ಸುಳ್ಯದಲ್ಲಿ ಮುಸ್ಲಿಮ್ ವಿದ್ಯಾರ್ಥಿಗೆ ಹಲ್ಲೆ: 9 ಮಂದಿ ABVP ಕಾರ್ಯಕರ್ತರ ಬಂಧನ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತನ್ನ ಸಹಪಾಠಿ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ ನೆಪದಲ್ಲಿ ಮುಸ್ಲಿಮ್ ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿ ABVP ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಸುಳ್ಯದ ಪ್ರಥಮ ದರ್ಜೆ ಕಾಲೇಜಿನ ಬಿಕಾಂ ವಿದ್ಯಾರ್ಥಿ ಮುಹಮ್ಮದ್ ಸನಿಫ್ ಎಂಬಾತನಿಗೆ ಅದೇ ಕಾಲೇಜಿನ ಹಿಂದೂ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ ಆರೋಪದಲ್ಲಿ ABVP ಕಾರ್ಯಕರ್ತರ ಗುಂಪೊಂದು ಗಂಭೀರವಾಗಿ ಹಲ್ಲೆ ನಡೆಸಿತ್ತು.

ಜಾಲ್ಸೂರು ಎಂಬಲ್ಲಿನ ನಿವಾಸಿಯಾದ ಸನಿಫ್ ಎಂಬಾತನ ಮೇಲೆ ABVP ಕಾರ್ಯಕರ್ತರು ಕಾಲೇಜಿನ ಆಟದ ಮೈದಾನಕ್ಕೆ ಕರೆದೊಯ್ದು ದೊಣ್ಣೆಯಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದು, ಸದ್ಯ ಸಂತ್ರಸ್ತ ಮುಹಮ್ಮದ್ ಸನಿಫ್ ನೀಡಿದ ದೂರಿಗೆ ಸಂಬಂಧಿಸಿದಂತೆ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಸನಿಫ್ ಅವರು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಘಟನೆಯಲ್ಲಿ ನೇರವಾಗಿ ಪಾಲ್ಗೊಂಡ ಐವರು ವಿದ್ಯಾರ್ಥಿಗಳು ಮತ್ತು ಹಲ್ಲೆಗೆ ಬೆಂಬಲ ನೀಡಿದ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹಲ್ಲೆಗೊಳಗಾದ ಮುಹಮ್ಮದ್ ಸನೀಫ್ (19) ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ವಿರುದ್ಧ ಐಪಿಸಿ ಕಲಂ 143.147.148.323.324.506. ಹಾಗೂ 149 ಕಲಂಗಳಡಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Join Whatsapp